Kargil Vijay Diwas: ಇಂದು ಕಾರ್ಗಿಲ್ ವಿಜಯ್ ದಿವಸ್: ಸುಶ್ರಾವ್ಯವಾಗಿ 'ದೇಶ್ ಮೇರೆ..' ಹಾಡು ನುಡಿಸಿದ ಯೋಧರು- ನೋಡಿ - ಕಾರ್ಗಿಲ್ ಯುದ್ಧ
🎬 Watch Now: Feature Video
ಲಡಾಖ್ : ಜುಲೈ 26ರಂದು ಪ್ರತಿ ವರ್ಷ ದೇಶಾದ್ಯಂತ ಕಾರ್ಗಿಲ್ ವಿಜಯ್ ದಿವಸ್ ಆಚರಿಸಲಾಗುತ್ತದೆ. 1999ರಲ್ಲಿ ಕಾರ್ಗಿಲ್ನಲ್ಲಿ ನಡೆದ ಯುದ್ಧದಲ್ಲಿ ಭಾರತೀಯ ಸೇನೆ ಪಾಕಿಸ್ತಾನದ ವಿರುದ್ಧ ವೀರೋಚಿತ ಗೆಲುವು ಸಾಧಿಸಿತ್ತು. ಯುದ್ಧದಲ್ಲಿ ವೀರಮರಣವನ್ನಪ್ಪಿದ ಯೋಧರ ತ್ಯಾಗ, ಬಲಿದಾನವನ್ನು ಇಂದು ಸ್ಮರಿಸಲಾಗುತ್ತಿದೆ. ಮಂಗಳವಾರ (ನಿನ್ನೆ) ಯುದ್ಧದಲ್ಲಿ ಮಡಿದ ಯೋಧರಿಗೆ ಮೊಂಬತ್ತಿ ಹಚ್ಚಿ ಶ್ರದ್ಧಾಂಜಲಿ ಅರ್ಪಿಸಲಾಯಿತು. ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಲು ಕಾರ್ಗಿಲ್ ಯುದ್ಧ ಸ್ಮಾರಕದಲ್ಲಿ ಇಂದು ಪುಷ್ಪಾರ್ಚನೆ ಸಮಾರಂಭ ಆಯೋಜಿಸಲಾಗಿದೆ.
ನಿನ್ನೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕ ಪೈಪ್ ಬ್ಯಾಂಡ್ ಮತ್ತು ಸ್ಟ್ಯಾಟಿಕ್ ಬ್ಯಾಂಡ್ ಪ್ರದರ್ಶನ ನಡೆದವು. ಲಡಾಖ್ನ ಯೋಧರು 'ದೇಶ್ ಮೇರೆ' ಹಾಡು ನುಡಿಸುವ ಮೂಲಕ ಗಮನ ಸೆಳೆದರು. ವಾದ್ಯ ಮೇಳಗಳು ನೆರೆದವರನ್ನು ಮಂತ್ರಮುಗ್ಧಗೊಳಿಸಿದವು.
ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಎರಡು ದಿನಗಳ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಪ್ರತಿ ವರ್ಷದಂತೆ ಈ ವರ್ಷವೂ ದೆಹಲಿಯ ಇಂಡಿಯಾ ಗೇಟ್ನ ಅಮರ್ ಜವಾನ್ ಜ್ಯೋತಿ ಸ್ಮಾರಕದಲ್ಲಿ ದೇಶಕ್ಕಾಗಿ ಬಲಿದಾನ ಮಾಡಿದ ಯೋಧರಿಗೆ ಗೌರವ ನಮನ ಸಲ್ಲಿಸಲಿದ್ದಾರೆ.
ಇದನ್ನೂ ಓದಿ : ಲಡಾಖ್ನಲ್ಲಿ ಕಾರ್ಗಿಲ್ ವಿಜಯ ದಿನ ಆಚರಣೆಗೆ ಸಿದ್ಧತೆ: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮುಖ್ಯ ಅತಿಥಿ