ಮುಂದಿನ 48 - 72 ಗಂಟೆಗಳಲ್ಲಿ ಸಚಿವ ಸಂಪುಟ ರಚನೆ: ಇನ್ನೂ ಯಾವುದೂ ಅಂತಿಮವಾಗಿಲ್ಲ... ಸುರ್ಜೇವಾಲಾ - ಕರ್ನಾಟಕ ಸಿಎಂ ಆಯ್ಕೆ ಕಸರತ್ತು
🎬 Watch Now: Feature Video
ನವದೆಹಲಿ: ಕರ್ನಾಟಕದ ಮುಂದಿನ ಸಿಎಂ ಆಯ್ಕೆ ಕಸರತ್ತು ಇನ್ನೂ ಜಾರಿಯಲ್ಲಿದೆ. ಸದ್ಯ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಸಮಾಲೋಚನೆ ನಡೆಯುತ್ತಿದೆ. ಈ ಬಗ್ಗೆ ಶೀಘ್ರವೇ ನಿರ್ಧಾರ ತೆಗೆದುಕೊಳ್ಳಲಿದ್ದೇವೆ ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ತಿಳಿಸಿದರು.
ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಂದಿನ ಸಿಎಂ ಬಗ್ಗೆ ಪಕ್ಷ ಇನ್ನೂ ಯಾವುದೇ ನಿರ್ಧಾರಕ್ಕೆ ಬಂದಿಲ್ಲ. ನಿರ್ಧಾರ ಕೈಗೊಂಡು ಶೀಘ್ರವೇ ತಿಳಿಸಲಾಗುವುದು. ಮುಂದಿನ 48- 72 ಗಂಟೆಗಳಲ್ಲಿ ಕರ್ನಾಟಕದಲ್ಲಿ ಹೊಸ ಸಚಿವ ಸಂಪುಟ ರಚನೆಯಾಗಲಿದೆ ಎಂದು ಹೇಳಿದರು.
ಸಿಎಂ ಪ್ರಬಲ ಆಕಾಂಕ್ಷಿಗಳಾದ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಜೊತೆಗೆ ಪಕ್ಷದ ನಾಯಕ ರಾಹುಲ್ ಗಾಂಧಿಯ ದೆಹಲಿ ನಿವಾಸದಲ್ಲಿ ಇಂದು ಬೆಳಗ್ಗೆ ಮಾತುಕತೆ ನಡೆಸಿದರು. ಬಳಿಕ ಇಬ್ಬರೂ ಅಲ್ಲಿಂದ ತೆರಳಿದರೂ ಸಿಎಂ ಯಾರೆಂಬ ಸಸ್ಪೆನ್ಸ್ ಮಾತ್ರ ಹೊರಬೀಳಲಿಲ್ಲ. ಇದಕ್ಕೂ ಮೊದಲು ನಿನ್ನೆ ಇಡೀ ದಿನ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರ ನಿವಾಸದಲ್ಲಿ ಸಿಎಂ ಆಯ್ಕೆ ಕಸರತ್ತು ಜೋರಾಗೇ ನಡೆದಿತ್ತು. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಸಿದ್ದರಾಮಯ್ಯ, ಸುರ್ಜೇವಾಲಾ, ವೇಣುಗೋಪಾಲ್ ಸೇರಿದಂತೆ ಹಲವು ನಾಯಕರೊಂದಿಗೆ ಸಭೆ ನಡೆಸಲಾಗಿತ್ತು.
ಇದನ್ನೂ ಓದಿ: ಕರ್ನಾಟಕಕ್ಕೆ ಯಾರು ಸಿಎಂ? ದೆಹಲಿಯಲ್ಲಿ ರಾಹುಲ್ ಭೇಟಿಯಾದ ಸಿದ್ದರಾಮಯ್ಯ, ಡಿಕೆಶಿ