ಹಾವೇರಿಯಲ್ಲಿ ಟ್ರಕ್​ಗಳ ಡಿಕ್ಕಿ: ಧಗಧಗನೆ ಹೊತ್ತಿ ಉರಿದ ವಾಹನಗಳು-ವಿಡಿಯೋ - ಶಿಗ್ಗಾಂವ್ ಬಳಿ ರಾಷ್ಟ್ರೀಯ ಹೆದ್ದಾರಿ 48

🎬 Watch Now: Feature Video

thumbnail

By

Published : May 29, 2023, 10:21 AM IST

ಹಾವೇರಿ: ಜಿಲ್ಲೆಯ ಶಿಗ್ಗಾಂವ್ ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಇಂದು ನಸುಕಿನ ಜಾವ ಎರಡು ಟ್ರಕ್‌ಗಳ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದ ಬಳಿಕ ಉಂಟಾದ ಬೆಂಕಿಯ ಕೆನ್ನಾಲಿಗೆಗೆ ಟ್ರಕ್‌ಗಳು ಸುಟ್ಟು ಕರಕಲಾಗಿವೆ.​ ಚಾಲಕರು ವಾಹನದಿಂದ ಇಳಿದು ಪ್ರಾಣ ಕಾಪಾಡಿಕೊಂಡಿದ್ದಾರೆ.

ಇದನ್ನೂ ಓದಿ: ಬಳ್ಳಾರಿಯಲ್ಲಿ ಸರ್ಕಾರಿ ಬಸ್-ಲಾರಿ ಅಪಘಾತ; ಇಬ್ಬರು ಸಾವು, 30ಕ್ಕೂ ಹೆಚ್ಚು ಮಂದಿಗೆ ಗಾಯ

ಅಗ್ನಿ ದುರಂತದ ಸುದ್ದಿ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದವರು ಭೇಟಿ ನೀಡಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಅಗ್ನಿಯ ಕೆನ್ನಾಲಿಗೆ ಸಿಲುಕಿರುವ ಟ್ರಕ್​ಗಳು ಸುಟ್ಟು ಕರಕಲಾಗಿವೆ. ಈ ಕುರಿತ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ. ಘಟನಾ ಸ್ಥಳಕ್ಕೆ ಶಿಗ್ಗಾಂವಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎರಡು ವಾಹನಗಳು ಬೆಂಕಿ ಅನಾಹುತಕ್ಕೆ ಸಿಲುಕಿ ಧಗಧಗನೆ ಹೊತ್ತಿ ಉರಿಯುತ್ತಿರುವ ವಿಡಿಯೋ ಲಭ್ಯವಾಗಿದೆ. ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇದನ್ನೂ ಓದಿ: ಬಟ್ಟೆ ತುಂಬಿದ ಲಾರಿಗೆ ಹಿಂದಿನಿಂದ ಸ್ಪಿರಿಟ್ ಲಾರಿ ಡಿಕ್ಕಿ: ಹೊತ್ತಿ ಉರಿದ ಲಾರಿಗಳು - ವಿಡಿಯೋ

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.