thumbnail

By ETV Bharat Karnataka Team

Published : Sep 19, 2023, 9:59 AM IST

ETV Bharat / Videos

ಕೆಆರ್​ಎಸ್‌ನಿಂದ ತಮಿಳುನಾಡಿಗೆ 5,000 ಕ್ಯೂಸೆಕ್ ನೀರು ಹರಿಸಿದ ಸರ್ಕಾರ: ವಿಡಿಯೋ

ಮಂಡ್ಯ: ರಾಜ್ಯದ ಜನತೆಯ ತೀವ್ರ ವಿರೋಧದ ನಡುವೆಯೂ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದಂತೆ ಇದೀಗ ಕರ್ನಾಟಕ ಸರ್ಕಾರ ಮತ್ತೆ ತಮಿಳುನಾಡಿಗೆ ನೀರು ಹರಿಸುತ್ತಿದೆ. ಕಳೆದ ರಾತ್ರಿಯಿಂದಲೇ ಮಂಡ್ಯದ ಕೆಆರ್‌ಎಸ್‌ ಅಣೆಕಟ್ಟೆಯಿಂದ ನೀರು ಬಿಡುವ ಕಾರ್ಯ ಪ್ರಾರಂಭವಾಗಿದ್ದು, 5,000 ಕ್ಯೂಸೆಕ್​ ನೀರು ಬಿಡುಗಡೆ ಮಾಡಲಾಗಿದೆ.

ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್​ ನೀರು ಬಿಡುವಂತೆ ಸೂಚನೆ ನೀಡಿದ್ದ ಕಾವೇರಿ ನೀರು ನಿಯಂತ್ರಣ ಸಮಿತಿಯ ನಿರ್ಧಾರವನ್ನು ಎತ್ತಿ ಹಿಡಿದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ತಮಿಳುನಾಡು ಸರ್ಕಾರಕ್ಕೆ ಸೆಪ್ಟೆಂಬರ್​ 13ರಿಂದ ಅನ್ವಯವಾಗುವಂತೆ 15 ದಿನಗಳ ಕಾಲ ಪ್ರತಿದಿನ ಐದು ಸಾವಿರ ಕ್ಯೂಸೆಕ್​ ನೀರು ಬಿಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿತ್ತು. ಅದರಂತೆ ರಾಜ್ಯದ ಜನರ ವಿರೋಧದ ಮಧ್ಯೆಯೂ ಅಧಿಕಾರಿಗಳು ತಮಿಳುನಾಡಿಗೆ ನೀರು ಬಿಟ್ಟಿದ್ದಾರೆ.

ಮಳೆ ಇಲ್ಲದೆ ಕೆಆರ್​ಎಸ್​ ಡ್ಯಾಂನಲ್ಲಿ ನೀರಿನ ಕೊರತೆ ಇದ್ದು, ಇದೇ ರೀತಿ ನೀರು ಬಿಟ್ಟರೆ ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ಸಮಸ್ಯೆಯಾಗಲಿದೆ ಎಂದು ರೈತ ಸಂಘಟನೆಗಳು, ವಿರೋಧ ಪಕ್ಷದ ನಾಯಕರು, ಸೇರಿ ರಾಜ್ಯದ ಜನತೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ : ತಮಿಳುನಾಡಿಗೆ ನಿತ್ಯ 5 ಸಾವಿರ ಕ್ಯೂಸೆಕ್​ ನೀರು ಬಿಡಲು ಸಿಡಬ್ಲ್ಯುಎಂಎ ಆದೇಶ.. ರಾಜ್ಯಕ್ಕೆ ಮತ್ತೆ ಸಂಕಷ್ಟ

ABOUT THE AUTHOR

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.