ಗೋಕರ್ಣ ಮಹಾಬಲೇಶ್ವರನ ದರ್ಶನ ಪಡೆದ ರಾಜ್ಯಪಾಲರು.. ವಿಶೇಷ ಪೂಜೆ ಸಲ್ಲಿಕೆ - ಆತ್ಮಲಿಂಗ ಸ್ಪರ್ಶಿಸಿ ಪೂಜೆ
🎬 Watch Now: Feature Video
Published : Dec 14, 2023, 11:02 PM IST
ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಅಧಿಕೃತ ಪ್ರವಾಸ ಕೈಗೊಂಡಿರುವ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಇಂದು ಗೋಕರ್ಣ ಮಹಾಬಲೇಶ್ವರ ದೇವಸ್ಥಾನ ಹಾಗೂ ಮುರುಡೇಶ್ವರಕ್ಕೆ ತೆರಳಿ ದೇವರ ದರ್ಶನ ಪಡೆದರು. ನೌಕಾ ದಿನಾಚರಣೆ ನಿಮಿತ್ತ ನೌಕಾನೆಲೆಗೆ ಆಗಮಿಸಿದ್ದ ಅವರು ಇಂದು ಬೆಳಗ್ಗೆ ಮೊದಲು ಗೋಕರ್ಣ ಮಹಾಬಲೇಶ್ವರ ದೇವಾಲಯಕ್ಕೆ ತೆರಳಿ ಆತ್ಮಲಿಂಗದ ದರ್ಶನ ಪಡೆದರು.
ಇನ್ನು ಗೋಕರ್ಣಕ್ಕೆ ರಾಜ್ಯಪಾಲರು ಆಗಮಿಸುತ್ತಿದ್ದಂತೆ ದೇವಸ್ಥಾನದ ಆಡಳಿತ ಸಮಿತಿಯಿಂದ ಪಂಚವಾದ್ಯಗಳೊಂದಿಗೆ ಬರಮಾಡಿಕೊಳ್ಳಲಾಯಿತು. ಇದೇ ವೇಳೆ ನವ ಧಾನ್ಯಾಭಿಷೇಕ, ರುದ್ರಾಭಿಷೇಕ, ಪಂಚಾಮೃತಾಭಿಷೇಕ ನೆರವೇರಿಸಿದ ರಾಜ್ಯಪಾಲರು ಆತ್ಮಲಿಂಗ ಸ್ಪರ್ಶಿಸಿ ಪೂಜೆ ಸಲ್ಲಿಸಿದರು.
ಇನ್ನು ಎರಡನೆಯ ಬಾರಿಗೆ ಮಹಾಬಲೇಶ್ವರನ ದರ್ಶನ ಪಡೆದ ರಾಜ್ಯಪಾಲರ ಜೊತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಕೂಡ ಉಪಸ್ಥಿತರಿದ್ದರು. ಇನ್ನು ರಾಜ್ಯಪಾಲರ ಆಗಮನದ ಹಿನ್ನೆಲೆ ದೇವಸ್ಥಾನದಲ್ಲಿ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು. ಅಲ್ಲದೇ ರಾಜ್ಯಪಾಲರ ನಿರ್ಗಮನದ ವರೆಗೂ ದೇವಸ್ಥಾನಕ್ಕೆ ಸಾರ್ವಜನಿಕರ ದರ್ಶನ ಸ್ಥಗಿತಗೊಳಿಸಲಾಗಿತ್ತು.
ಇನ್ನು ಗೋಕರ್ಣದಲ್ಲಿ ಮಹಾಬಲೇಶ್ವರ ದೇವರ ದರ್ಶನದ ಬಳಿಕ ರಸ್ತೆ ಮಾರ್ಗದ ಮೂಲಕ ಭಟ್ಕಳ ತಾಲೂಕಿನ ಮುರುಡೇಶ್ವರಕ್ಕೆ ತೆರಳಿ ದೇವರ ದರ್ಶನ ಪಡೆದರು. ಮುರುಡೇಶ್ವರದಲ್ಲಿಯೂ ರಾಜ್ಯಪಾಲರು ವಿಶೇಷ ಪೂಜೆ ಸಲ್ಲಿಸಿದರು. ಮಧ್ಯಾಹ್ನದ ಊಟದ ಬಳಿಕ ಮಂಗಳೂರಿಗೆ ರಾಜ್ಯಪಾಲರು ತೆರಳಿದರು.
ಇದನ್ನೂಓದಿ:ಹದಗೆಟ್ಟ ರಸ್ತೆಗೆ ಡಾಂಬರ್: ಗೋಪಾಲಸ್ವಾಮಿ ಬೆಟ್ಟಕ್ಕೆ 3 ದಿನ ನೋ ಎಂಟ್ರಿ!