ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ: ಕೇರಳದಲ್ಲಿ ಮುಂದುವರಿದ ವೈದ್ಯರ ಮುಷ್ಕರ - ವೈದ್ಯರ ಮುಷ್ಕರ
🎬 Watch Now: Feature Video
ತಿರುವನಂತಪುರಂ: ಕೊಲ್ಲಂ ಜಿಲ್ಲೆಯ ಕೊಟ್ಟಾರಕ ತಾಲೂಕು ಆಸ್ಪತ್ರೆಯಲ್ಲಿ ಬುಧವಾರ ಚಿಕಿತ್ಸೆ ಪಡೆಯಲು ಬಂದಿದ್ದ ವ್ಯಕ್ತಿಯೊಬ್ಬ ಕತ್ತರಿ ಮತ್ತು ಚಾಕುವಿನಿಂದ ದಾಳಿ ನಡೆಸಿ ಅಲ್ಲಿ ಕೆಲಸ ಮಾಡುತ್ತಿದ್ದ 23 ವರ್ಷದ ವೈದ್ಯೆ ಡಾ. ವಂದನಾ ದಾಸ್ ಎಂಬುವರನ್ನು ಹತ್ಯೆ ಮಾಡಿದ್ದನ್ನ ಖಂಡಿಸಿ ವೈದ್ಯರು ನಡೆಸುತ್ತಿರುವ ಪ್ರತಿಭಟನೆ ಎರಡನೇ ದಿನಕ್ಕೆ ಮುಂದುವರಿದಿದೆ.
ರಾಜ್ಯಾದ್ಯಂತ ವೈದ್ಯರ ಮುಷ್ಕರ ಇಂದು ಮುಂದುವರೆದಿದ್ದು, ತಿರುವನಂತಪುರಂನಲ್ಲಿರುವ ಸೆಕ್ರೆಟರಿಯೇಟ್ ಮುಂದೆ ವೈದ್ಯರ ಸಂಘಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಹಾಗೆಯೇ, ಮೃತ ವಂದನಾ ದಾಸ್ಗೆ ಶ್ರದ್ಧಾಂಜಲಿ ಸಲ್ಲಿಸಿ ಜಿಲ್ಲಾ ಕೇಂದ್ರಗಳಲ್ಲಿಯೂ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಲಾಗುತ್ತಿದೆ. ಕೊಟ್ಟಾಯಂ ಜಿಲ್ಲೆಯ ಕಡುತುರುತಿಯಲ್ಲಿರುವ ಅವರ ಮನೆಯಲ್ಲಿ ಇಂದು ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗಿದ್ದು, ವಿರೋಧ ಪಕ್ಷದ ನಾಯಕ ವಿ.ಡಿ.ಸತೀಶನ್, ಸಚಿವರು, ಶಾಸಕರು, ಆರೋಗ್ಯ ಕಾರ್ಯಕರ್ತರು ಅಂತಿಮ ನಮನ ಸಲ್ಲಿಸಿದರು. ಇಂದು ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಲಿದೆ. ನಿನ್ನೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ರಾಜ್ಯಪಾಲ ಆರಿಫ್ ಮುಹಮ್ಮದ್ ಖಾನ್ ತಿರುವನಂತಪುರದಲ್ಲಿ ಅಂತಿಮ ನಮನ ಸಲ್ಲಿಸಿದ್ದರು.
ಇದನ್ನೂ ಓದಿ : ಕೇರಳ ವೈದ್ಯೆ ಕೊಂದ ಕುಡುಕ ಹಂತಕನಿಗೆ 14 ದಿನ ನ್ಯಾಯಾಂಗ ಬಂಧನ, ಕೊಲೆ ಕಾರಣ ನಿಗೂಢ
ಇನ್ನು ವೈದ್ಯೆ ಮೇಲೆ ದಾಳಿ ಮಾಡಿ ಕೊಂದಿರುವ ವ್ಯಕ್ತಿಯನ್ನ ಸಂದೀಪ್ ಎಂದು ಗುರುತಿಸಲಾಗಿದೆ. ಈತ ಶಾಲಾ ಶಿಕ್ಷಕನಾಗಿದ್ದು, ಸೇವೆಯಿಂದ ಅಮಾನತುಗೊಂಡಿದ್ದ. ಕುಟುಂಬದವರೊಂದಿಗೆ ಗಲಾಟೆ ಮಾಡಿಕೊಂಡು ಗಾಯಗೊಂಡಿದ್ದ. ಈ ವೇಳೆ ಚಿಕಿತ್ಸೆ ಕೊಡಿಸಲು ಪೊಲೀಸರು ಆಸ್ಪತ್ರೆಗೆ ಕರೆ ತಂದಿದ್ದರು. ಈ ವೇಳೆ ಚಿಕಿತ್ಸೆ ನೀಡುತ್ತಿದ್ದ ವಂದನಾ ದಾಸ್ ಮೇಲೆ ಆರೋಪಿ ದಾಳಿ ಮಾಡಿದ್ದ.