ಮನೆಯ ದೇವರ ಕೋಣೆಗೆ ನುಗ್ಗಿದ ಕಾಳಿಂಗ ಸರ್ಪ : ರಕ್ಷಿಸಿ ಕಾಡಿಗೆ ಬಿಟ್ಟ ಸ್ನೇಕ್ ಜೋಯ್ - ಈಟಿವಿ ಭಾರತ ಕನ್ನಡ
🎬 Watch Now: Feature Video
ಬೆಳ್ತಂಗಡಿ (ದಕ್ಷಿಣ ಕನ್ನಡ) : ಮನೆಯ ದೇವರ ಕೋಣೆಯೊಳಗೆ ಸೇರಿಕೊಂಡಿದ್ದ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ರಕ್ಷಣೆ ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದಲ್ಲಿ ನಡೆದಿದೆ. ಗ್ರಾಮದ ನೆರೋಲ್ದಪಲ್ಕೆ ದಿನೇಶ್ ಗೌಡ ಎಂಬವರ ಮನೆಯ ದೇವರ ಕೋಣೆಯಲ್ಲಿ ಕಾಳಿಂಗ ಸರ್ಪ ಕಂಡುಬಂದಿದೆ.
ಮಾ.15ರ ಬುಧವಾರದಂದು ಸುಮಾರು 12 ಅಡಿ ಉದ್ದದ ಕಾಳಿಂಗ ಸರ್ಪ ಮನೆಯ ದೇವರ ಕೋಣೆಯಲ್ಲಿ ಕಾಣಿಸಿಕೊಂಡಿತ್ತು. ಕಾಳಿಂಗ ಸರ್ಪವನ್ನು ಕಂಡ ಮನೆಯವರು ಗಾಬರಿಗೊಂಡಿದ್ದಾರೆ. ಬಳಿಕ ಕುಟುಂಬಸ್ಥರು ಉಜಿರೆಯ ಉರಗ ಪ್ರೇಮಿ ಸ್ನೇಕ್ ಜೋಯ್ ಅವರಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಉರಗ ಪ್ರೇಮಿ ಸ್ನೇಕ್ ಜೋಯ್, ಕಾಳಿಂಗ ಸರ್ಪವನ್ನು ಹಿಡಿದು ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟಿದ್ದಾರೆ.
ಕಾಳಿಂಗ ಸರ್ಪವು ವಿಶ್ವದ ಅತಿ ಉದ್ದವಾಗಿ ಬೆಳೆಯುವ ವಿಷಯುಕ್ತ ಹಾವುಗಳಲ್ಲಿ ಒಂದಾಗಿದೆ. ಇವು ಸಾಮಾನ್ಯವಾಗಿ ಆಗ್ನೇಯ ಏಷ್ಯಾ ಮತ್ತು ಭಾರತದ ವಿವಿಧ ಭಾಗಗಳಲ್ಲಿ ಕಂಡುಬರುತ್ತದೆ. ಇವು ಪ್ರಮುಖವಾಗಿ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತದೆ. ಕೆಲವೊಮ್ಮೆ ಆಹಾರವನ್ನು ಅರಸಿಕೊಂಡು ಜನವಸತಿ ಪ್ರದೇಶಕ್ಕೆ ಬರುತ್ತದೆ.
ಇದನ್ನೂ ಓದಿ : ಚಾಮರಾಜನಗರ: ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನಮರ