ವಿರಾಟ್ ಕೊಹ್ಲಿ ಶತಕಕ್ಕಾಗಿ ಮೈದಾನದಲ್ಲಿ ಕಾತರದಿಂದ ಎದುರುನೋಡುತ್ತಿರುವ ಅಭಿಮಾನಿಗಳು... - india vs srilanak match
🎬 Watch Now: Feature Video
Published : Nov 2, 2023, 3:53 PM IST
ಮುಂಬೈ: ಇಂದು ವಾಂಖೆಡೆ ಮೈದಾನದಲ್ಲಿ ಭಾರತ ಮತ್ತು ಶ್ರೀಲಂಕಾ ನಡುವೆ ವಿಶ್ವಕಪ್ ಪಂದ್ಯ ನಡೆಯುತ್ತಿದೆ. ಸತತ ಗೆಲುವಿನೊಂದಿಗೆ ವಿಶ್ವಕಪ್ ಟೂರ್ನಿಯಲ್ಲಿ ಮುನ್ನುಗ್ಗುತ್ತಿರುವ ಭಾರತ ಶ್ರೀಲಂಕಾ ವಿರುದ್ದ ಇಂದಿನ ಪಂದ್ಯ ಗೆದ್ದು ಅಗ್ರಸ್ಥಾನಕ್ಕೇರಲು ಯೋಜನೆ ರೂಪಿಸಿಕೊಂಡಿದೆ. ಈ ಪಂದ್ಯಕ್ಕೆ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದಾರೆ.
ಕಾರಣ ಇದೇ ಮೈದಾನದಲ್ಲಿ ಶ್ರೀಲಂಕಾ ವಿರುದ್ಧ ಹಿಂದೆ ನಡೆದಿದ್ದ ಏಕದಿನ ಸರಣಿಯ ಪಂದ್ಯದಲ್ಲಿ ರೋಹಿತ್ ಶರ್ಮಾ ಬರೋಬ್ಬರಿ 264 ರನ್ಗಳನ್ನು ಬಾರಿಸಿ ಅತಿ ಹೆಚ್ಚು ರನ್ಗಳಿಸಿದ ಆಟಗಾರ ಎಂಬ ದಾಖಲೆ ಬರೆದಿದ್ದರು. ಹಾಗಾಗಿ ಇಂದಿನ ಪಂದ್ಯದಲ್ಲೂ ದೊಡ್ಡ ಮೊತ್ತದ ಸ್ಕೋರ್ ಕಲೆ ಹಾಕುವರು ಎಂದು ಅಭಿಮಾನಿಗಳು ಅಂದುಕೊಂಡಿದ್ದರು. ಆದರೆ ರೋಹಿತ್ ಕೇವಲ ನಾಲ್ಕು ರನ್ಗಳಿಸಿ ತಮ್ಮ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿ ಅಭಿಮಾನಿಗಳನ್ನು ನಿರಾಸೆಗೊಳಿಸಿದರು.
ಮತ್ತೊಂದೆಡೆ ವಿರಾಟ್ ಫ್ಯಾನ್ಸ್ ಕೂಡ ಆಗಮಿಸಿದ್ದು, ಇಂದಿನ ಪಂದ್ಯದಲ್ಲಿ ಕೊಹ್ಲಿ ಶತಕ ಬಾರಿಸುವ ಮೂಲಕ ಸಚಿನ್ ತೆಂಡೂಲ್ಕರ್ ಅವರ ದಾಖಲೆ ಸರಿಗಟ್ಟಲಿದ್ದಾರೆ ಎಂದು ಕಾತರದಿಂದ ಎದುರು ನೋಡುತ್ತಿದ್ದಾರೆ. ಸದ್ಯ ಅರ್ದಶತಕ ಪೂರ್ಣಯಿಸಿ 64 ರನ್ಗಳನ್ನು ಸಿಡಿಸಿರುವ ಕೊಹ್ಲಿ ತಮ್ಮ ಆಟವನ್ನು ಮುಂದುವರೆಸಿದ್ದಾರೆ. ಈ ಬಗ್ಗೆ ಅಭಿಮಾನಿಗಳು ಈಟಿವಿ ಭಾರತದೊಂದಿಗೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.
ಇದನ್ನೂ ಓದಿ: ಹೋಮ್ ಪಿಚ್ನಲ್ಲಿ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ ರೋಹಿತ್.. ನಾಲ್ಕು ರನ್ನಿಗೆ ಹಿಟ್ ಮ್ಯಾನ್ ಔಟ್