ಕೋಲಾರದಲ್ಲಿ ವರಮಹಾಲಕ್ಷಿ ಹಬ್ಬದ ಸಂಭ್ರಮ; ದೇವಿಗೆ ನೋಟುಗಳ ಸಿಂಗಾರ, ಮಹಿಳೆಯರಿಗೆ ಅರಿಶಿಣ ಕುಂಕುಮ ವಿತರಣೆ! - varamahalakshmi festival 2023
🎬 Watch Now: Feature Video
Published : Aug 25, 2023, 12:59 PM IST
ಕೋಲಾರ: ಸಮೃದ್ಧಿ ಮತ್ತು ಸಂಪತ್ತಿನ ಸಂಕೇತವಾಗಿ ರಾಜ್ಯಾದ್ಯಂತ ಇಂದು ವರಮಹಾಲಕ್ಷಿ ಹಬ್ಬವನ್ನು ಬಹಳ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಮನೆ ಮತ್ತು ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಯುತ್ತಿದ್ದು, ಮಹಿಳೆಯರು ಅರಿಶಿಣ ಕುಂಕುಮ ವಿನಿಮಯ ಮಾಡಿಕೊಳ್ಳುತ್ತಿದ್ದಾರೆ. ನಾಡಿಗೆ ಒಳಿತಾಗಲಿ ಎಂದು ಪ್ರಾರ್ಥಿಸುತ್ತಿದ್ದಾರೆ.
ಕೋಲಾರದಲ್ಲಿ ಇಂದು ವರಮಹಾಲಕ್ಷಿ ಹಬ್ಬದ ಪ್ರಯುಕ್ತ ದೇವಾಲಯಗಳಲ್ಲಿ ಅಪಾರ ಸಂಖ್ಯೆಯ ಭಕ್ತಾಧಿಗಳು ಆಗಮಿಸಿ ವಿಶೇಷ ಪೂಜೆ ಸಲ್ಲಿಸಿಸುತ್ತಿದ್ದಾರೆ. ಕೋಲಾರದ ಶಕ್ತಿ ದೇವಾಲಯವಾದ ಕೋಲಾರಮ್ಮನ ಸನ್ನಿಧಿಗೆ ಬರುವಂತಹ ಮಹಿಳೆಯರಿಗೆ ಮುಜರಾಯಿ ಇಲಾಖೆ ವತಿಯಿಂದ ಅರಿಶಿಣ ಕುಂಕುಮದ ಬ್ಯಾಗ್ಗಳನ್ನ ವಿತರಣೆ ಮಾಡಲಾಗುತ್ತಿದೆ. ಹಬ್ಬದ ನಿಮಿತ್ತ ಮುಂಜಾನೆಯಿಂದಲೂ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ. ಹತ್ತು ರೂಪಾಯಿ ನೋಟುಗಳ ಮೂಲಕ ಲಕ್ಷ್ಮಿ ದೇವಿಗೆ ಅಲಂಕಾರ ಮಾಡಿರುವುದು ವಿಶೇಷವಾಗಿದ್ದು, ಭಕ್ತರ ಗಮನ ಸೆಳೆಯಿತು.
ರಾಜ್ಯದ ಬಹುತೇಕ ಭಾಗಗಳಲ್ಲಿ ಇಂದು ವರಮಹಾಲಕ್ಷಿ ಹಬ್ಬವನ್ನು ವಿಶೇಷವಾಗಿ ಆಚರಿಸಲಾಗುತ್ತಿದೆ. ಮನೆಗಳಲ್ಲಿಯೂ ಮಹಿಳೆಯರು ದೇವಿಯನ್ನು ವಿಭಿನ್ನವಾಗಿ ಅಲಂಕರಿಸಿ ಪೂಜೆ ಸಲ್ಲಿಸುತ್ತಿದ್ದಾರೆ. ನಗರದ ದೇವಿ ಸನ್ನಿಧಿಗೆ ಭೇಟಿ ಕೊಟ್ಟು ಪೂಜೆ, ಪ್ರಾರ್ಥನೆ ಸಲ್ಲಿಸಲಾಗುತ್ತಿದೆ. ದೇವಾಲಯಕ್ಕೆ ಆಗಮಿಸುವ ಮಹಿಳೆಯರಿಗೆ ಅರಿಶಿಣ ಕುಂಕುಮ ಸೇರಿ ಬಾಗಿನ ವಿತರಣೆ ಮಾಡಲಾಗುತ್ತಿದೆ.
ಇದನ್ನೂ ಓದಿ: ಧಾರವಾಡದಲ್ಲಿ ವರಮಹಾಲಕ್ಷ್ಮಿ ಸಂಭ್ರಮ: ಮಹಿಳೆಯರಿಗೆ ಅರಿಶಿನ, ಕುಂಕುಮ, ಬಾಗಿನ ವಿತರಣೆ