ಮೊಸರು ಕುಡಿಕೆ ಒಡೆಯುವ ಮೂಲಕ ಕೃಷ್ಣ ಜನ್ಮಾಷ್ಟಮಿ ಆಚರಿಸಿದ ಸಿಎಂ ಚೌಹಾಣ್ - ಕೃಷ್ಣ ಜನ್ಮಾಷ್ಟಮಿ ಆಚರಿಸಿದ ಸಿಎಂ ಚೌಹಾಣ್
🎬 Watch Now: Feature Video
ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಪ್ರತಿ ವರ್ಷದಂತೆ ಈ ವರ್ಷವೂ ಮೊಸರು ಕುಡಿಕೆ ಒಡೆಯುವ ಮೂಲಕ ಕೃಷ್ಣ ಜನ್ಮಾಷ್ಟಮಿ ಆಚರಿಸಿ ಭಜನೆ ಮಾಡಿದರು. ಭೋಪಾಲ್‌ನಲ್ಲಿ ನಡೆದ ಕೃಷ್ಣ ಜನ್ಮಾಷ್ಟಮಿ ಆಚರಣೆ ವೇಳೆ ಶಿವರಾಜ್ ಸಿಂಗ್ಗೆ ಪಕ್ಷದ ನಾಯಕರು ಸೇರಿದಂತೆ ಶ್ರೀಕೃಷ್ಣನ ಇತರ ಭಕ್ತರೂ ಸಾಥ್ ನೀಡಿದರು. ಕೃಷ್ಣ ಜನ್ಮಾಷ್ಟಮಿ ಹಬ್ಬದಲ್ಲಿ ಶಿವರಾಜ್ ಸಿಂಗ್ ಭಕ್ತಿಯಿಂದ ಕಾಣುತ್ತಿದ್ದರು. ಶಿವರಾಜ್ ಸಿಂಗ್ ತಮ್ಮ ಪತ್ನಿಯೊಂದಿಗೆ ಶ್ರೀಕೃಷ್ಣನಿಗೆ ವಿಶೇಷ ಪೂಜೆ ಸಲ್ಲಿಸಿದರು. ಶಿವರಾಜ್ ಸಿಂಗ್ ಚೌಹಾಣ್ ಮೊಸರು ಕುಡಿಕೆ ಒಡೆಯುತ್ತಿರುವ ದೃಶ್ಯಗಳನ್ನು ಸ್ಥಳೀಯರು ತಮ್ಮ ಕ್ಯಾಮೆರಾದಲ್ಲಿ ರೆಕಾರ್ಡ್ ಮಾಡಿಕೊಂಡಿದ್ದರು. ಈ ವಿಡಿಯೋಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ನಗರದ ಅನೇಕ ಸ್ಥಳಗಳಲ್ಲಿ ಮೊಸರು ಕುಡಿಕೆ ಒಡೆಯುವ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
Last Updated : Feb 3, 2023, 8:27 PM IST
TAGGED:
Krishna Janmotsav in India