ಹಾಸನದಲ್ಲಿ ಸಾರಿಗೆ ಬಸ್ ಪಲ್ಟಿ: 10ಕ್ಕೂ ಹೆಚ್ಚು ಮಂದಿಗೆ ಗಾಯ - ಹಾಸನ ರಸ್ತೆ ಅಪಘಾತ
🎬 Watch Now: Feature Video
Published : Jan 5, 2024, 6:57 AM IST
ಹಾಸನ : ಸಾರಿಗೆ ಬಸ್ ಪಲ್ಟಿಯಾಗಿ ಓರ್ವ ಗಂಭೀರವಾಗಿ ಗಾಯಗೊಂಡಿದ್ದು, 10ಕ್ಕೂ ಹೆಚ್ಚು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣದ ಸಮೀಪ ಗೌಡಗೆರೆ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಸಂಭವಿಸಿದೆ.
ಚಾಲಕನ ಅಜಾಗರೂಕತೆ ಮತ್ತು ಅತಿ ವೇಗವೇ ಘಟನೆಗೆ ಕಾರಣ ಎನ್ನಲಾಗಿದೆ. ಬೆಂಗಳೂರಿನಿಂದ ಹಾಸನಕ್ಕೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಕಾರೊಂದನ್ನು ಹಿಂದಿಕ್ಕುವ ಭರದಲ್ಲಿ ರಸ್ತೆಯಲ್ಲಿದ್ದ ಹಂಪ್ಸ್ ಮೇಲೆ ರಭಸವಾಗಿ ಚಲಿಸಿದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಚಿಕ್ಕಮಗಳೂರು ವಿಭಾಗಕ್ಕೆ ಸೇರಿದ ಸಕಲೇಶಪುರ ಡಿಪೋದ ಬಸ್ ಇದಾಗಿದ್ದು, ನಿರ್ವಾಹಕನಿಗೆ ಗಂಭೀರವಾಗಿ ಗಾಯವಾಗಿದೆ. ಆತನನ್ನು ಹಾಸನದ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.
ಬಸ್‌ನಲ್ಲಿ 20 ಕ್ಕೂ ಅಧಿಕ ಮಂದಿ ಪ್ರಯಾಣಿಸುತ್ತಿದ್ದರು. ಗಾಯಾಳುಗಳನ್ನು ತುರ್ತು ವಾಹನದಲ್ಲಿ ಚನ್ನರಾಯಪಟ್ಟಣ ಆಸ್ಪತ್ರೆಗೆ ದಾಖಲಿಸಿ, ಪ್ರಥಮ ಚಿಕಿತ್ಸೆ ನೀಡಲಾಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ, ಪಲ್ಟಿಯಾದ ಬಸ್ ಅನ್ನು ಮೇಲೆತ್ತಿ, ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಈ ಸಂಬಂಧ ಚನ್ನರಾಯಪಟ್ಟಣ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ : ಕಾರವಾರದ ಬಳಿ ಕಂದಕಕ್ಕೆ ನುಗ್ಗಿದ ಬಸ್ : 30ಕ್ಕೂ ಹೆಚ್ಚು ಕಾರ್ಮಿಕರು ಪಾರು