ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಮುಳುಗಡೆ: ವಿಡಿಯೋ - Kumaradhara river
🎬 Watch Now: Feature Video
ಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದೆ. ಘಟ್ಟ ಪ್ರದೇಶದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಸಂಪೂರ್ಣವಾಗಿ ಮುಳುಗಡೆಯಾಗಿದೆ. ಪ್ರವಾಸಿಗರ ಲಗೇಜ್ ಕೊಠಡಿ, ಶೌಚಾಲಯ ಸೇರಿದಂತೆ ಎಲ್ಲವೂ ಮುಳುಗಡೆಯಾಗಿದೆ. ಸುಬ್ರಹ್ಮಣ್ಯ, ಕೊಲ್ಲಮೊಗ್ರು, ಬಿಸಿಲೆ ಘಾಟ್, ಅಡ್ಡಹೊಳೆ, ಸೋಮವಾರಪೇಟೆ ಮೊದಲಾದೆಡೆ ಭಾರಿ ಮಳೆಯಾಗುತ್ತಿದ್ದು ಕುಮಾರಧಾರಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ.
ಮುಂಜಾಗೃತಾ ಕ್ರಮವಾಗಿ ನದಿ ಸಮೀಪ ತೆರಳದಂತೆ ದೇವಾಲಯದ ಭಕ್ತರಿಗೆ ತಹಶೀಲ್ದಾರ್ ರಮೇಶ್ ಬಾಬು ಸೂಚನೆ ನೀಡಿದ್ದಾರೆ. ಸ್ಥಳದಲ್ಲಿ ಪೊಲೀಸರು, ಗೃಹರಕ್ಷಕ ದಳದಿಂದ ಕಾವಲು ನಿಯೋಜಿಸಲಾಗಿದೆ. ಸ್ಥಳದಲ್ಲಿ ಗೃಹರಕ್ಷಕ, ಎಸ್‌ಡಿಆರ್‌ಎಫ್ ತಂಡಗಳನ್ನು ನಿಯೋಜನೆ ಮಾಡಲಾಗಿದೆ.
ಕುಮಾರಧಾರ ನದಿಯ ನೀರು ಹೆಚ್ಚಳವಾಗಿ ಸುಬ್ರಹ್ಮಣ್ಯ-ಮಂಜೇಶ್ವರ ಹೆದ್ದಾರಿ ಬಂದ್ ಆಗಿದೆ. ಹೆದ್ದಾರಿ ಮೇಲೆ ನೀರು ಹರಿಯುತ್ತಿದ್ದು ರಾಜ್ಯ ಹೆದ್ದಾರಿ ಸಂಪರ್ಕ ಕಡಿತವಾಗಿದೆ. ಇನ್ನು ಸುಬ್ರಹ್ಮಣ್ಯ, ಕಡಬ, ಸುಳ್ಯ, ನೆಲ್ಯಾಡಿ, ಉಪ್ಪಿನಂಗಡಿ ಪರಿಸರ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿದೆ.
ಇದನ್ನೂ ಓದಿ: ಮಲೆನಾಡು ಭಾಗದಲ್ಲಿ ಮಳೆ, ತುಂಗಭದ್ರಾ ನದಿಗೆ ಬಂತು ಜೀವಕಳೆ...!