ಕಾವೇರಿ ನೀರು ನಿಲ್ಲಿಸುವ ನಿರ್ಣಯ ಮಂಡಿಸದಿದ್ದರೆ ದಸರಾ ಹಬ್ಬದಂದು ರಸ್ತೆಗಳು ಬಂದ್: ಕುರುಬೂರು ಶಾಂತಕುಮಾರ್
🎬 Watch Now: Feature Video
ಬೆಂಗಳೂರು: ಕಾವೇರಿ ನೀರು ವಿಚಾರವಾಗಿ ರಾಜ್ಯ ಸರ್ಕಾರ ಜನರ ದಿಕ್ಕು ತಪ್ಪಿಸುತ್ತಿದೆ. ಹೋರಾಟವನ್ನು ಹಗುರವಾಗಿ ಕಾಣುತ್ತಿದೆ. ಮುಖ್ಯಮಂತ್ರಿಗಳಿಗೆ ನೀರು ನಿಲ್ಲಿಸಲು ಆಗದಿದ್ದಲ್ಲಿ ವಿಧಾನ ಮಂಡಲದ ಅಧಿವೇಶನ ಕರೆದು ನಿರ್ಣಯ ಮಂಡಿಸಿ ಕೇಂದ್ರಕ್ಕೆ ಎಚ್ಚರಿಸಲಿ. ಇಲ್ಲದಿದ್ದರೆ ದಸರಾ ಹಬ್ಬದ ದಿನ ಎಲ್ಲ ರಸ್ತೆಗಳನ್ನೂ ಬಂದ್ ಮಾಡಿ ಚಳುವಳಿ ನಡೆಸಬೇಕಾಗುತ್ತದೆ ಎಂದು ಕರ್ನಾಟಕ ಜಲ ಸಂರಕ್ಷಣಾ ಸಮಿತಿಯ ಸಂಚಾಲಕ ಕುರುಬೂರು ಶಾಂತಕುಮಾರ್ ಎಚ್ಚರಿಕೆ ನೀಡಿದರು.
ಇಂದು ಕರ್ನಾಟಕ ಜಲ ಸಂರಕ್ಷಣಾ ಸಮಿತಿ 12ನೇ ದಿನದ ಹೋರಾಟದ ಅಂಗವಾಗಿ ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಉರುಳು ಸೇವೆ ಮೂಲಕ ಪ್ರತಿಭಟನೆ ಮಾಡಲಾಯಿತು. ಬೆಂಗಳೂರು ನಗರದ ಎಲ್ಲ ಶಾಸಕರ ಮನೆಯ ಮುಂದೆ 15ರಂದು ಸಂಘ ಸಂಸ್ಥೆಗಳು ಬಾಯಿ ಬಡಿದುಕೊಳ್ಳುವ ಮೂಲಕ ಪ್ರತಿಭಟನೆ ನಡೆಸಿ ಎಚ್ಚರಿಕೆ ನೀಡಬೇಕು ಎಂದು ಕುರುಬೂರು ಶಾಂತಕುಮಾರ್ ಕರೆ ಕೊಟ್ಟರು.
ಗುರುದೇವ್ ನಾರಾಯಣ ಕುಮಾರ್, ವೆಂಕಟಸ್ವಾಮಿ, ಕೆ.ಕೆ.ಮೋಹನ್, ರಾಜಪ್ಪ ಕಿರುಗಸೂರು ಶಂಕರ್ ಸೇರಿದಂತೆ ಮುಂತಾದ ರೈತ ಮುಖಂಡರು ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧದವರೆಗೆ ಉರುಳುಸೇವೆ ಆರಂಭಿಸಿದರು. ಸಂಘಟನೆಗಳ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದರು.
ಇದನ್ನೂ ಓದಿ: ಅ.31 ರವರೆಗೆ ತಮಿಳುನಾಡಿಗೆ ಪ್ರತಿದಿನ 3 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಕರ್ನಾಟಕಕ್ಕೆ ಮತ್ತೆ ಆದೇಶ