ವಿಶ್ವಪ್ರಸಿದ್ಧ ಗೌಡಗೆರೆ ಚಾಮುಂಡಿ ಸನ್ನಿಧಿಯಲ್ಲಿ ಲಕ್ಷ ದೀಪೋತ್ಸವ.. ಸಾವಿರಾರು ಭಕ್ತರು ಭಾಗಿ
🎬 Watch Now: Feature Video
ರಾಮನಗರ : ಚನ್ನಪಟ್ಟಣ ತಾಲೂಕಿನ ಗೌಡಗೆರೆ ಗ್ರಾಮದ ಐತಿಹಾಸಿಕ ಚಾಮುಂಡೇಶ್ವರಿ ಬಸಪ್ಪನವರ ಕ್ಷೇತ್ರದಲ್ಲಿ ವೈಭವದ ಲಕ್ಷ ದೀಪೋತ್ಸವ ಕಾರ್ಯಕ್ರಮ ಅದ್ಧೂರಿಯಾಗಿ ಜರುಗಿತು. ಕ್ಷೇತ್ರದ ಪವಾಡ ಬಸಪ್ಪನವರ ಹುಟ್ಟುಹಬ್ಬ ಹಾಗೂ ಕಾರ್ತಿಕ ಅಮಾವಾಸ್ಯೆ ಪ್ರಯುಕ್ತ ನಡೆದ ಲಕ್ಷ ದೀಪೋತ್ಸವ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತರು ಭಾಗವಹಿಸಿದ್ದರು. ಲಕ್ಷ ದೀಪೋತ್ಸವ ಕಾರ್ಯಕ್ರಮದ ಪ್ರಯುಕ್ತ ಚಾಮುಂಡೇಶ್ವರಿ ತಾಯಿಗೆ ಅಭಿಷೇಕ, ವಿಶೇಷ ಅಲಂಕಾರ, ತಾಯಿಯ ಮೆರವಣಿಗೆ, ಪವಾಡ ಬಸವಪ್ಪನ ಗದ್ದುಗೆಗೆ ಪೂಜೆ ಸೇರಿದಂತೆ ನಾನಾ ಧಾರ್ಮಿಕ ಕಾರ್ಯಕ್ರಮಗಳು ಜರುಗಿದರು. ಸಂಜೆ ನಡೆದ ದೀಪೋತ್ಸವ ಕಾರ್ಯಕ್ರಮಕ್ಕೆ ಕ್ಷೇತ್ರದ ಧರ್ಮದರ್ಶಿ ಡಾ.ಮಲ್ಲೇಶ್ ಗುರೂಜಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಸೇರಿದಂತೆ ವಿವಿಧ ಗಣ್ಯರು, ಸರ್ಕಾರಿ ಅಧಿಕಾರಿಗಳು ಭಾಗಿಯಾಗಿದ್ದರು.
Last Updated : Feb 3, 2023, 8:33 PM IST