ಮೊದಲ ಬಾರಿಗೆ ಸಚಿವೆಯಾಗಿ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಮಾಣವಚನ: ಬೆಳಗಾವಿ ಕೈ ಕಾರ್ಯಕರ್ತರ ಸಂಭ್ರಮಾಚರಣೆ - sateesh jarakiholi
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/640-480-18609467-thumbnail-16x9-sa.jpg)
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮೊದಲ ಬಾರಿಗೆ ಸಚಿವರಾಗಿ ಇಂದು ಬೆಂಗಳೂರಿನ ರಾಜ ಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ನಗರದಲ್ಲಿ ಇಂದು ಕಾಂಗ್ರೆಸ್ ಕಾರ್ಯಕರ್ತರು ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿರುವ ಜಿಲ್ಲಾ ಕಾಂಗ್ರೆಸ್ ಭವನದ ಎದುರು ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ್ ನಾವಲಗಟ್ಟಿ ನೇತೃತ್ವದಲ್ಲಿ ಪಟಾಕಿ ಸಿಡಿಸಿ ಕಾರ್ಯಕರ್ತರು ಸಂಭ್ರಮಿಸಿದರು. ಜೊತೆಗೆ ಸಚಿವರಾದ ಸತೀಶ್ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಪರ ಕಾರ್ಯಕರ್ತರು ಘೋಷಣೆ ಕೂಗಿದರು. ಈ ವೇಳೆ ಕಾಂಗ್ರೆಸ್ ಮುಖಂಡರಾದ ಪ್ರದೀಪ್ ಜೆ, ಬಸವರಾಜ ಶೇಗಾವಿ, ರಾಜಾಸಲೀಂ ಕಾಶಿಂನವರ, ಆಯಿಷಾ ಸನದಿ ಸೇರಿ ಮತ್ತಿತರರು ಉಪಸ್ಥಿತರಿದ್ದರು.
ಸಚಿವರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ಮುಗಿಯುತ್ತಿದ್ದಂತೆ, ನೂತನ ಸಚಿವರಿಗೆ ಖಾತೆ ಹಂಚಿಕೆ ಕೂಡ ಮಾಡಲಾಗಿದ್ದು, ನಿರೀಕ್ಷೆಯಂತೆ ಸತೀಶ್ ಜಾರಕಿಹೊಳಿ ಅವರಿಗೆ ಲೋಕೋಪಯೋಗಿ ಇಲಾಖೆ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನೀಡಲಾಗಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ಹೆಬ್ಬಾಳ್ಕರ್ಗೆ ಡಬಲ್ ಸಂಭ್ರಮ: ಸಚಿವ ಸ್ಥಾನ ಸಿಕ್ಕ ಬೆನ್ನಲ್ಲೇ ಲಕ್ಷ್ಮೀ ಮನೆಗೆ ಮಹಾಲಕ್ಷ್ಮೀ ಆಗಮನ