ಬೆಂಗಳೂರಲ್ಲಿ ಮನೆ ಮುಂದೆ ಮಲಗಿದ್ದ ನಾಯಿಯನ್ನು ಎಳೆದೊಯ್ದ ಚಿರತೆ : ವಿಡಿಯೋ - ಈಟಿವಿ ಭಾರತ ಕನ್ನಡ
🎬 Watch Now: Feature Video
ಬೆಂಗಳೂರು : ಮನೆ ಮುಂದೆ ಮಲಗಿದ್ದ ನಾಯಿ ಮೇಲೆ ಚಿರತೆ ದಾಳಿ ನಡೆಸಿರುವ ಘಟನೆ ನೆಲಮಂಗಲ ತಾಲೂಕಿನ ಮರಸರಹಳ್ಳಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ನಾಲ್ಕು ದಿನದ ಹಿಂದೆ ಮಧ್ಯರಾತ್ರಿ 2 ಗಂಟೆ ವೇಳೆಗೆ ಆಹಾರ ಅರಸಿ ಬಂದ ಚಿರತೆಯು ನಾಯಿ ಮೇಲೆ ದಾಳಿ ನಡೆಸಿದೆ. ಬಳಿಕ ನಾಯಿಯ ಕುತ್ತಿಗೆಗೆ ಬಾಯಿ ಹಾಕಿ ಎಳೆದೊಯ್ಯುವ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೆಂಗಳೂರು ನಗರದ ಸುತ್ತಮುತ್ತ ಚಿರತೆ ದಾಳಿ ಪ್ರಕರಣಗಳು ಹೆಚ್ಚುತ್ತಿರುವುದು ಜನರ ನಿದ್ದೆಗೆಡಿಸಿದೆ. ಘಟನೆ ನಂತರ ಅರಣ್ಯ ಇಲಾಖೆ ಚಿರತೆ ಸೆರೆ ಹಿಡಿಯಲು ಗ್ರಾಮದಲ್ಲಿ ಬೋನ್ ಅಳವಡಿಸಿದೆ.
Last Updated : Feb 3, 2023, 8:34 PM IST