ಮೈಸೂರು: ರಾಮಕೃಷ್ಣ ಆಶ್ರಮದ ಶಾಲೆ ಆವರಣದಲ್ಲಿ ಬೋನಿಗೆ ಬಿದ್ದ ಚಿರತೆ.. ವಿಡಿಯೋ - ರಾಮಕೃಷ್ಣ ಆಶ್ರಮ
🎬 Watch Now: Feature Video
Published : Dec 19, 2023, 5:41 PM IST
ಮೈಸೂರು: ಮೈಸೂರಿನ ರಾಮಕೃಷ್ಣ ಆಶ್ರಮದ ಶಾಲೆ ಆವರಣದಲ್ಲಿ ಮಂಗಳವಾರ ಮುಂಜಾನೆ ಚಿರತೆಯೊಂದು ಸೆರೆಯಾಗಿದೆ. ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ನಾಲ್ಕು ವರ್ಷದ ಗಂಡು ಚಿರತೆ ಬಿದ್ದಿದೆ. ಶಾಲಾ ಆವರಣದಲ್ಲಿ ಕೆಲ ದಿನಗಳ ಹಿಂದೆ ಚಿರತೆ ಕಾಣಿಸಿಕೊಂಡಿರುವ ಬಗ್ಗೆ ಆಶ್ರಮದ ಸಿಬ್ಬಂದಿ, ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಅರಣ್ಯ ಇಲಾಖೆ ನಾಲ್ಕು ದಿನದ ಹಿಂದಷ್ಟೇ ಇಟ್ಟಿದ ಬೋನಿಗೆ ಚಿರತೆ ಬಿದ್ದಿದೆ. ಅರಣ್ಯ ಇಲಾಖೆಯ ವಲಯ ಅಧಿಕಾರಿಗಳಾದ ಆರ್‌ಎಫ್ಒ ಕೆ. ಸುರೇಂದ್ರ ಮತ್ತು ಸಿಬ್ಬಂದಿ ಬೋನಿಗೆ ಬಿದ್ದ ಚಿರತೆಯನ್ನು ಅರಣ್ಯಕ್ಕೆ ಬಿಡಲು ರವಾನಿಸಿದ್ದಾರೆ.
ಹಸು ಬಲಿ ಪಡೆದಿದ್ದ ಚಿರತೆ ಸೆರೆಗೆ: ಕೆಲವು ದಿನಗಳ ಹಿಂದಷ್ಟೇ ಟಿ.ನರಸೀಪುರ ತಾಲೂಕಿನ ಕೇತುಪುರ ಗ್ರಾಮದ ಹೊರವಲಯದಲ್ಲಿ ಹಸುವಿನ ಮೇಲೆ ದಾಳಿ ಮಾಡಿ ಕೊಂದು ಹಾಕಿದ್ದ, ಚಿರತೆ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿತ್ತು. ಹಸು ಬಲಿ ಪಡೆದಿದ್ದ ಚಿರತೆಯನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರು ಅರಣ್ಯಾಧಿಕಾರಿಗಳನ್ನು ಒತ್ತಾಯಿಸಿದ್ದರು. ಈ ಹಿನ್ನೆಲೆ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ನಾಲ್ಕು ವರ್ಷದ ಗಂಡು ಚಿರತೆ ಬಿದ್ದಿತ್ತು.
ಇದನ್ನೂ ಓದಿ: ಮೈಸೂರು: ಕಬ್ಬಿನ ಗದ್ದೆಯಲ್ಲಿ ಸಿಕ್ಕ ಮೂರು ಚಿರತೆ ಮರಿಗಳನ್ನು ತಾಯಿ ಮಡಿಲಿಗೆ ಸೇರಿಸಿದ ಅರಣ್ಯ ಇಲಾಖೆ