ಉರುಳಿಗೆ ಸಿಲುಕಿ ಚಿರತೆ ಸಾವು: ಪ್ರಕರಣ ದಾಖಲು - ಈಟಿವಿ ಭಾರತ ಕನ್ನಡ
🎬 Watch Now: Feature Video
ಚಿಕ್ಕಮಗಳೂರು: ಕಾಡು ಹಂದಿ ಭೇಟೆಗಾಗಿ ಹಾಕಿದ್ದ ಉರುಳಿಗೆ ಸಿಲುಕಿ ಚಿರತೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಿಳಗುಳ ಕೊಲ್ಲಿಬ್ಯೆಲ್ನಲ್ಲಿ ನಡೆದಿದೆ. ಲಕ್ಷ್ಮಣಗೌಡ ಎಂಬುವವರಿಗೆ ಸೇರಿದ ಪಾಳು ಬಿದ್ದ ಕಾಫಿ ತೋಟದಲ್ಲಿ ದುಷ್ಕರ್ಮಿಗಳು ಕಾಡು ಹಂದಿ ಬೇಟೆಗಾಗಿ ಹಾಕಿದ್ದ ಉರುಳಿಗೆ ಸಿಲುಕಿ ಮೂರು ವರ್ಷದ ಚಿರತೆ ಮೃತಪಟ್ಟಿದೆ. ಕಡೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಕೆಲವೆ ಅಡಿ ದೂರದದಲ್ಲಿರುವ ಈ ಕಾಫಿ ತೋಟದಲ್ಲಿ ನಿನ್ನೆ ರಾತ್ರಿ ಉರುಳಿಗೆ ಸಿಲುಕಿ ಚಿರತೆ ಕಿರುಚಾಡಿದೆ.
ಬಳಿಕ ಪ್ರಯಾಣಿಕರು ಇದನ್ನು ಗಮನಿಸಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ಚಿರತೆ ಬದುಕಿಸಲು ಪ್ರಯತ್ನ ಪಟ್ಟಿದ್ದು, ಕುತ್ತಿಗೆ ಉರುಳು ಬಲವಾಗಿ ಸಿಲುಕಿದ್ದ ಕಾರಣ ಚಿರತೆ ಮೃತ ಪಟ್ಟಿದೆ. ಈ ಸಂಬಂಧ ತೋಟದ ಮಾಲೀಕ ಮತ್ತು ದುಷ್ಕರ್ಮಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮರಣೋತ್ತರ ಪರೀಕ್ಷೆಗೆ ಎಂದು ಚಿರತೆಯ ದೇಹವನ್ನು ಮೂಡಿಗೆರೆ ಅರಣ್ಯ ಇಲಾಖೆಗೆ ಕಳುಹಿಸಲಾಗಿದೆ.
ಇದನ್ನೂ ಓದಿ: ಮೈಸೂರು: ಆರ್ಬಿಐ ಸಮೀಪ ಬೋನಿಗೆ ಬಿದ್ದ ಚಿರತೆ