ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಬಳಿ ಚಿರತೆ ಪ್ರತ್ಯಕ್ಷ: ವಿಡಿಯೋ - ಅರಣ್ಯ ಇಲಾಖೆ
🎬 Watch Now: Feature Video
Published : Dec 22, 2023, 10:56 AM IST
ದೊಡ್ಡಬಳ್ಳಾಪುರ : ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಬಳಿಯ ವೀರಾಪುರ ಗ್ರಾಮದಲ್ಲಿ ಚಿರತೆ ಓಡಾಡಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಕೈಗಾರಿಕಾ ಪ್ರದೇಶದಲ್ಲಿನ ನಿವಾಸಿಗಳ ಆತಂಕಕ್ಕೆ ಕಾರಣವಾಗಿದೆ.
ದೊಡ್ಡಬಳ್ಳಾಪುರ ನಗರದ ಹೊರವಲಯದಲ್ಲಿರುವ ವೀರಾಪುರ ಗ್ರಾಮ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶಕ್ಕೆ ಅಂಟಿಕೊಂಡಿದೆ. ಗ್ರಾಮದ ರಾಮಮೂರ್ತಿ ಮನೆಯಂಗಳದಲ್ಲಿ ಚಿರತೆ ಒಡಾಡಿದ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮಧ್ಯರಾತ್ರಿ ಸುಮಾರು 12 ಗಂಟೆ ಸಮಯದಲ್ಲಿ ಮನೆ ಮುಂದಿನ ಅಡಕೆ ತೋಟದಲ್ಲಿ ಚಿರತೆ ಓಡಾಡಿದ ದೃಶ್ಯ ಸೆರೆಯಾಗಿದೆ.
ರಾಮಮೂರ್ತಿಯವರ ಕೋಳಿಯನ್ನು ಚಿರತೆ ತಿಂದು ಹೋಗಿರುವುದು ಹಾಗೂ ಅದರ ತಿರುಗಾಟ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿನ ಜನರ ಆತಂಕಕ್ಕೆ ಕಾರಣವಾಗಿದೆ. ಈ ಪ್ರದೇಶದಲ್ಲಿ ಸಾವಿರಾರು ಕಾರ್ಮಿಕರು ವಾಸವಾಗಿದ್ದು, ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಸ್ಥಳೀಯರು ಮನವಿ ಮಾಡಿದ್ದಾರೆ.
ಬೋನಿಗೆ ಬಿದ್ದ ಚಿರತೆ (ಮೈಸೂರು) : ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಚಿರತೆ ಕೊನೆಗೂ ಅರಣ್ಯಾಧಿಕಾರಿಗಳು ಇಟ್ಟಿದ್ದ ಬೋನಿಗೆ (ಡಿಸೆಂಬರ್ 17-23) ಬಿದ್ದಿತ್ತು. ಕಳೆದ ಕೆಲವು ದಿನಗಳ ಹಿಂದಷ್ಟೇ ಈ ಚಿರತೆ ಹಸುವಿನ ಮೇಲೆ ದಾಳಿ ಮಾಡಿ ಕೊಂದು ಹಾಕಿತ್ತು. ಇದರಿಂದ ಗ್ರಾಮಸ್ಥರು ಭಯಭೀತಗೊಂಡಿದ್ದರು. ಚಿರತೆ ಸೆರೆ ಹಿಡಿಯುವಂತೆ ಅರಣ್ಯಾಧಿಕಾರಿಗಳಲ್ಲಿ ಒತ್ತಾಯಿಸಿದ್ದರು. ತಿ. ನರಸೀಪುರ ತಾಲೂಕಿನ ಕೇತುಪುರ ಗ್ರಾಮದ ಹೊರವಲಯದಲ್ಲಿ ಸೆರೆಗೆ ಬೋನು ಇರಿಸಲಾಗಿತ್ತು. ಕೊನೆಗೂ ನಾಲ್ಕು ವರ್ಷದ ಗಂಡು ಚಿರತೆ ಬೋನಿನಲ್ಲಿ ಸೆರೆಯಾಗಿತ್ತು.
ಇದನ್ನೂ ಓದಿ : ಮೈಸೂರು: ಬೋನಿಗೆ ಬಿದ್ದ ಚಿರತೆ, ಗ್ರಾಮಸ್ಥರ ನಿಟ್ಟುಸಿರು