ಹಾವೇರಿ: ಬೋನಿಗೆ ಬಿದ್ದ ಚಿರತೆ; ಗ್ರಾಮಸ್ಥರು ನಿರಾಳ - ಈಟಿವಿ ಭಾರತ್ ಕನ್ನಡ ನ್ಯೂಸ್
🎬 Watch Now: Feature Video
ಹಾವೇರಿ : ಜಿಲ್ಲೆಯ ಹಿರೇಕೆರೂರು ತಾಲೂಕಿನ ಚಿನ್ನಮುಳಗುಂದ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಇಟ್ಟಿದ್ದ ಬೋನಿಗೆ ಚಿರತೆ ಬಿದ್ದಿದೆ. ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಚಿನ್ನಮುಳಗುಂದ ಗ್ರಾಮ ಸೇರಿದಂತೆ ಅಕ್ಕಪಕ್ಕದ ಗ್ರಾಮಸ್ಥರು ಭಯಗೊಂಡಿದ್ದರು. ಅರಣ್ಯಾಧಿಕಾರಿಗಳಿಗೆ ದೂರು ನೀಡಿದ್ದರು. ಇಲಾಖೆಯ ಸಿಬ್ಬಂದಿ ಚಿರತೆ ಹೆಜ್ಜೆ ಗುರುತು ಪತ್ತೆ ಮಾಡಿ ಬೋನು ಇಟ್ಟಿದ್ದರು. ನಿನ್ನೆ ತಡರಾತ್ರಿ (ಭಾನುವಾರ) ಚಿರತೆ ಬೋನಿಗೆ ಬಿದ್ದಿದೆ. ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
ಜೂನ್ 18ರಂದು ಬೆಳಗ್ಗೆ ಗಂಗಾವತಿ ಮುಖ್ಯರಸ್ತೆಯ ಪಕ್ಕದಲ್ಲಿರುವ ಮಾಜಿ ಸಚಿವ ಮಲ್ಲಿಕಾರ್ಜುನ ನಾಗಪ್ಪ ಅವರ ಬೆಣಕಲ್ ತೋಟದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿನಲ್ಲಿ ಒಂದೂವರೆ ವರ್ಷದ ಗಂಡು ಚಿರತೆ ಸೆರೆಯಾಗಿತ್ತು. ಈ ಭಾಗದಲ್ಲಿ ಕಳೆದ ಹಲವು ದಿನಗಳಿಂದ ಚಿರತೆ ಓಡಾಡುತ್ತಿರುವ ಬಗ್ಗೆ ಜನರಿಂದ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಬೋನು ಇಡಲಾಗಿತ್ತು. ಬೇಟೆ ಅರಸಿ ಬಂದಿದ್ದ ಚಿರತೆ ನಾಯಿ ಮೇಲೆ ದಾಳಿ ಮಾಡುವ ರಭಸದಲ್ಲಿ ಬೋನಿನಲ್ಲಿ ಸೆರೆಯಾಗಿತ್ತು.
ಇದನ್ನೂ ಓದಿ : ಗಂಗಾವತಿಯಲ್ಲಿ ಚಿರತೆ ಮರಿ.. ಸಿದ್ದಾಪುರದಲ್ಲಿ ಕರಡಿ ಪ್ರತ್ಯಕ್ಷ