ದೊಡ್ಡಬಳ್ಳಾಪುರ: ಲಘುಮೇನಹಳ್ಳಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ- ಸಿಸಿಟಿವಿ ದೃಶ್ಯ - ಲಘುಮೇನಹಳ್ಳಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ
🎬 Watch Now: Feature Video
ದೊಡ್ಡಬಳ್ಳಾಪುರ : ತಾಲೂಕಿನ ಲಘುಮೇನಹಳ್ಳಿ ಗ್ರಾಮದಲ್ಲಿ ಫೆಬ್ರವರಿ 17ರ ರಾತ್ರಿ 11ರ ಸುಮಾರಿಗೆ ಚಿರತೆ ಪ್ರತ್ಯಕ್ಷವಾಗಿದ್ದು, ಓಡಾಟದ ದೃಶ್ಯ ರೆಸಾರ್ಟ್‌ವೊಂದರ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಜನರು ಬೆಚ್ಚಿ ಬಿದ್ದಿದ್ದು ಗ್ರಾಮದಲ್ಲಿ ಮತ್ತೆ ಆತಂಕ ಮನೆ ಮಾಡಿದೆ. ಜನರು ಒಬ್ಬೊಬ್ಬರೇ ತಮ್ಮ ಹೊಲ, ತೋಟದತ್ತ ತೆರಳಲು ಭಯಪಡುತ್ತಿದ್ದಾರೆ. ಇತ್ತೀಚೆಗೆ ತಾಲೂಕಿನ ಬಚ್ಚಹಳ್ಳಿ, ಅಂತರಹಳ್ಳಿ ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಯಾವುದೇ ಅಪಾಯ ಉಂಟಾಗುವ ಮುನ್ನ ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಇದನ್ನೂ ಓದಿ: ಆಹಾರ ಅರಸಿ ನಾಡಿಗೆ ಬಂದ ಕಾಡಾನೆ, ಸಿಮೆಂಟ್ ಟ್ಯಾಂಕ್‌ಗೆ ಬಿದ್ದು ಸಾವು