ಹುತಾತ್ಮ ಯೋಧರಿಗೆ ಅಂತಿಮ ನಮನ ಸಲ್ಲಿಸಿದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ - Colonel Manpreet Singh
🎬 Watch Now: Feature Video
Published : Sep 14, 2023, 10:58 PM IST
ಜಮ್ಮು ಕಾಶ್ಮೀರ : ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಕೋಕರ್‌ನಾಗ್ ಪ್ರದೇಶದಲ್ಲಿ ಬುಧವಾರ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆದಿದ್ದ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆಯ ಮೂವರು ಯೋಧರು ಹುತಾತ್ಮರಾಗಿದ್ದರು. ಹುತಾತ್ಮರಾದ ಯೋಧರನ್ನು ಕರ್ನಲ್ ಮನ್‌ಪ್ರೀತ್ ಸಿಂಗ್, ಮೇಜರ್ ಆಶಿಶ್ ಧೋನಕ್ ಮತ್ತು ಡಿಎಸ್ಪಿ ಹುಮಾಯುನ್ ಭಟ್ ಎಂದು ಗುರುತಿಸಲಾಗಿತ್ತು. ಹುತಾತ್ಮರಾದ ಕರ್ನಲ್ ಮನ್‌ಪ್ರೀತ್ ಸಿಂಗ್ ಮತ್ತು ಮೇಜರ್ ಆಶಿಶ್ ಧೋನಕ್ ಅವರ ಪಾರ್ತಿವ ಶರೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅಂತಿಮ ನಮನ ಸಲ್ಲಿಸಿದರು.
ಈ ಬಗ್ಗೆ ಮಾಹಿತಿ ನೀಡಿದ್ದ ಜಮ್ಮು ಕಾಶ್ಮೀರ ಪೊಲೀಸರು, ಅನಂತ್ನಾಗ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಗಾಯಗೊಂಡಿದ್ದ ಭಾರತೀಯ ಸೇನೆಯ ಕರ್ನಲ್ ಮತ್ತು ಮೇಜರ್ ಹಾಗೂ ಡಿಎಸ್ಪಿ ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾರತೀಯ ಸೇನೆಯ ಕರ್ನಲ್ ಮನ್ ಪ್ರೀತ್ ಸಿಂಗ್ (ಕಮಾಂಡಿಂಗ್ ರಾಷ್ಟ್ರೀಯ ರೈಫಲ್ಸ್ ಯೂನಿಟ್) ಮತ್ತು ಮೇಜರ್ ಆಶಿಶ್ ಧೋನಕ್ ಅನಂತ್ನಾಗ್ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಇವರು ಆಫ್-ವೆಟ್ 19 ಆರ್‌ಆರ್‌ಗೆ ಕಮಾಂಡರ್ ಆಗಿದ್ದರು ಎಂದು ಭಾರತೀಯ ಸೇನೆಯ ಅಧಿಕಾರಿಗಳು ಮಾಹಿತಿ ನೀಡಿದ್ದರು.
ಇದನ್ನೂ ಓದಿ : ಮೂರು ತಲೆಮಾರುಗಳಿಂದಲೂ ದೇಶ ಸೇವೆ.. ಅಜ್ಜ, ತಂದೆಯ ಹಾದಿಯಲ್ಲಿ ಸಾಗಿದ್ದ ಹುತಾತ್ಮ ಕರ್ನಲ್ ಮನ್‌ಪ್ರೀತ್ ಸಿಂಗ್