ಲಂಚ ಸ್ವೀಕರಿಸುತ್ತಿದ್ದ ಶಿವಾಜಿನಗರ ಠಾಣಾ ಮಹಿಳಾ ಪಿಎಸ್ಐ ಲೋಕಾಯುಕ್ತ ಬಲೆಗೆ - ಲೋಕಾಯುಕ್ತ ಪೊಲೀಸರು
🎬 Watch Now: Feature Video
ಬೆಂಗಳೂರು : ಆರೋಪಿಯೊಬ್ಬನ ಜಾಮೀನು ಸ್ವೀಕರಿಸಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಮಹಿಳಾ ಪಿಎಸ್ಐ ಅವರನ್ನ ಲೋಕಾಯುಕ್ತ ಪೊಲೀಸರು ಟ್ರ್ಯಾಪ್ ಕಾರ್ಯಾಚರಣೆ ಕೈಗೊಂಡು ವಶಕ್ಕೆ ಪಡೆದಿದ್ದಾರೆ. ಶಿವಾಜಿನಗರ ಮಹಿಳಾ ಪೊಲೀಸ್ ಠಾಣೆಯ ಸವಿತಾ ಲೋಕಾಯುಕ್ತ ಬಲೆಗೆ ಬಿದ್ದ ಮಹಿಳಾ ಪಿಎಸ್ಐ ಎಂಬುದಾಗಿ ತಿಳಿದುಬಂದಿದೆ.
ವಶದಲ್ಲಿದ್ದ ಆರೋಪಿಯೊಬ್ಬನ ಜಾಮೀನು ಸ್ವೀಕರಿಸಲು ಐವತ್ತು ಸಾವಿರ ರೂಪಾಯಿಗೆ ಬೇಡಿಕೆಯಿಟ್ಟಿದ್ದ ಸವಿತಾಗೆ ಆರೋಪಿಯ ಕಡೆಯವರು ಅಷ್ಟು ಹಣ ನೀಡಲು ಸಾಧ್ಯವಿಲ್ಲ ಎಂದಿದ್ದರು. ಅಂತಿಮವಾಗಿ ಹದಿನೈದು ಸಾವಿರಕ್ಕೆ ಬೇಡಿಕೆಯಿಟ್ಟಿದ್ದ ಸವಿತಾ ವಿರುದ್ಧ ಆರೋಪಿ ಕಡೆಯವರಾದ ಅನಂತ್ ಕುಮಾರ್ ದೂರು ನೀಡಿದ್ದರು. ದೂರಿನನ್ವಯ ಇಂದು ಟ್ರ್ಯಾಪ್ ಕಾರ್ಯಾಚರಣೆ ಕೈಗೊಂಡ ಲೋಕಾಯಕ್ತ ಅಧಿಕಾರಿಗಳು ಹಣ ಸ್ವೀಕರಿಸುವಾಗಲೇ ಪಿಎಸ್ಐ ಸವಿತಾರನ್ನ ವಶಕ್ಕೆ ಪಡೆದಿದ್ದಾರೆ.
ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್: ಇನ್ನೊಂದೆಡೆ ಬೆಂಗಳೂರು ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎಂಟು ಮಂದಿ ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ಪೊಲೀಸರು (ಏಪ್ರಿಲ್ 25-2023)ರಂದು ದಾಳಿ ನಡೆಸಿದ್ದರು. ಈ ವೇಳೆ ಕೋಟ್ಯಂತರ ಮೌಲ್ಯದ ಚರಾಸ್ತಿ ಹಾಗೂ ಸ್ಥಿರಾಸ್ತಿಯನ್ನು ವಶಕ್ಕೆ ತೆಗೆದುಕೊಂಡಿದ್ದರು. ಆರೋಪಿತ ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ ಮನೆ, ಕಚೇರಿ ಹಾಗೂ ಸಂಬಂಧಿಕರ ಮನೆಗಳು ಸೇರಿದಂತೆ ಒಟ್ಟು 34 ಸ್ಥಳಗಳಲ್ಲಿ ಏಕಕಾಲಕ್ಕೆ ಶೋಧ ಕಾರ್ಯಕೈಗೊಳ್ಳಲಾಗಿತ್ತು.
ಇದನ್ನೂ ಓದಿ: 8 ಮಂದಿ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್.. ಕೆಜಿಗಟ್ಟಲೇ ಚಿನ್ನಾಭರಣ, ಕಣ್ಣಾಯಿಸಿದಲ್ಲೆಲ್ಲಾ ನಿವೇಶನ ಪತ್ತೆ!