ರಾಯಚೂರು: ಭತ್ತ ಹೊತ್ತೊಯ್ಯುತ್ತಿದ್ದ ಲಾರಿ ಪಲ್ಟಿ - ವಿಡಿಯೋ....
🎬 Watch Now: Feature Video
ರಾಯಚೂರು: ಭತ್ತವನ್ನು ಹೊತ್ತೊಯುತ್ತಿದ್ದ ಲಾರಿಯೊಂದು ಪಲ್ಟಿಯಾಗಿ ರಸ್ತೆಯ ಮೇಲೆ ಭತ್ತದ ಮೂಟೆಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಘಟನೆ ನಗರದ ಗದ್ವಾಲ್ ರಸ್ತೆಯಲ್ಲಿ ಇಂದು ಬೆಳಗಿನ ಜಾವ ನಡೆದಿದೆ. ಬಸವನಬಾವಿ ಚೌಕದ ಮೂಲಕ ಗದ್ವಾಲ್‌ಗೆ ತೆರಳುವಾಗ ರಸ್ತೆಗುಂಡಿಗೆ ಸಿಲುಕಿ ಲಾರಿ ಪಲ್ಟಿಯಾಗಿದೆ ಎನ್ನಲಾಗಿದೆ. ಘಟನೆಯಲ್ಲಿ ಲಾರಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಘಟನೆ ಬಳಿಕ ವಾಹನ ಸವಾರರು ಜನ ಪ್ರತಿನಿಧಿಗಳ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಈ ರಸ್ತೆಯು ಸಂಪೂರ್ಣ ಹಾಳಾಗಿದೆ. ದೊಡ್ಡ ಗುಂಡಿಗಳೂ ಬಿದ್ದಿವೆ. ಹೀಗಾಗಿ ನಿತ್ಯ ಸಂಚಾರಕ್ಕೆ ಕಷ್ಟಕರವಾಗಿದೆ. ನೆರೆಯ ತೆಲಂಗಾಣ ರಾಜ್ಯದ ಗದ್ವಾಲ್‌ಗೆ ತೆರಳಲು ಈ ರಸ್ತೆಯನ್ನು ಅವಲಂಭಿಸಬೇಕಾಗಿದೆ. ನಿತ್ಯ ನೂರಾರು ವಾಹನಗಳು ಈ ಮಾರ್ಗವಾಗಿ ಓಡಾಡುತ್ತವೆ. ಜೊತೆಗೆ ರೈಸ್ ಮೀಲ್ಗಳಿಗೂ ವಾಹನಗಳು ಆಗಮಿಸುತ್ತವೆ.
ಲಾರಿ ಪಲ್ಟಿಯಾದ ಘಟನೆ ಇದೇ ಮೊದಲೇನಲ್ಲ. ಕೆಲ ದಿನಗಳ ಹಿಂದೆ ಭತ್ತದ ಲಾರಿಯೊಂದು ಗುಂಡಿಗೆ ಸಿಲುಕಿತ್ತು. ಈ ರಸ್ತೆಯಲ್ಲಿ ಸಂಚಾರ ಮಾಡಲು ಕಷ್ಟಕರವಾಗಿದೆ. ಕೂಡಲೇ ಈ ಬಗ್ಗೆ ಜಿಲ್ಲಾಡಳಿತ, ನಗರಸಭೆ ಮತ್ತು ಜನಪ್ರತಿನಿಧಿಗಳ ಕ್ರಮ ಕೈಗೊಂಡು ರಸ್ತೆ ದುರಸ್ತಿಗೊಳಿಸಬೇಕು. ಮುಂದಾಗುವ ಅನಾಹುತಗಳನ್ನು ತಪ್ಪಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಇದನ್ನೂ ಓದಿ: ಬೆಳಗಾವಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿ; ಲಕ್ಷಕ್ಕೂ ಅಧಿಕ ಲೀಟರ್ ಹಾಲು ರಸ್ತೆಪಾಲು