ರಸ್ತೆ ದಾಟುತ್ತಿದ್ದ ವೃದ್ಧೆಯ ಮೇಲೆ ಹರಿದ ಲಾರಿ.. ಚಿಕಿತ್ಸೆ ಫಲಕಾರಿಯಾಗದೇ ಅಜ್ಜಿ ಸಾವು: ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ - ಚಿಕಿತ್ಸೆ ಫಲಕಾರಿಯಾಗದೇ ಸಾವು
🎬 Watch Now: Feature Video
Published : Aug 31, 2023, 12:52 PM IST
|Updated : Aug 31, 2023, 1:10 PM IST
ನೆಲಮಂಗಲ (ಬೆಂಗಳೂರು): ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ದಾಬಸ್ ಪೇಟೆಯಲ್ಲಿ ಭಯಾನಕ ಅಪಘಾತಯೊಂದು ನಡೆದಿದೆ. ಅಪಘಾತದಲ್ಲಿ ವೃದ್ಧೆಯೊಬ್ಬರು ಪ್ರಾಣ ಬಿಟ್ಟಿದ್ದಾರೆ.
ದಾಬಸ್ ಪೇಟೆಯ ಟೀಚರ್ಸ್ ಬಡಾವಣೆಯ ವೃದ್ಧೆ ರೇಣುಕಮ್ಮಾ (67) ಎಂಬುವರು ಉದ್ದಾನೇಶ್ವರ ಸರ್ಕಲ್ನಲ್ಲಿ ರಸ್ತೆ ದಾಟುತ್ತಿದ್ದರು. ಈ ವೇಳೆ ದೊಡ್ಡಬಳ್ಳಾಪುರ ಕಡೆಯಿಂದ ಬಂದ ಲಾರಿಯು ವೃದ್ಧೆ ರೇಣುಕಮ್ಮಾಗೆ ಹಿಂಬಂದಿಯಿಂದ ಡಿಕ್ಕಿ ಹೊಡೆದಿದೆ, ಅಲ್ಲದೆ ಕಾಲಿನ ಮೇಲೆ ಚಕ್ರ ಹರಿದಿದೆ. ಪರಿಣಾಮ ಸ್ಥಳದಲ್ಲಿ ತೀವ್ರ ರಕ್ತಸ್ರಾವಾಗಿದೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲು ತುರ್ತು ವಾಹನದಲ್ಲಿ ಕರೆದೊಯ್ಯಬೇಕಾದರೆ, ಮಾರ್ಗಮಧ್ಯದಲ್ಲಿ ವೃದ್ಧೆ ಸಾವನ್ನಪ್ಪಿದ್ದಾರೆ.
ಇನ್ನು ಅಪಘಾತ ಎಸಗಿ ಅಲ್ಲಿಂದ ಎಸ್ಕೇಪ್ ಆಗುತ್ತಿದ್ದ ಲಾರಿ ಚಾಲಕನನ್ನು ಸಾರ್ವಜನಿಕರು ಹಿಡಿದು ಪೊಲೀಸರ ವಶಕ್ಕೆ ನೀಡಿದ್ದಾರೆ. ಕೈಗಾರಿಕಾ ಪ್ರದೇಶ ಎಂದು ಹೆಸರಾಗಿರುವ ದಾಬಸ್ ಪೇಟೆಯಲ್ಲಿ ರಸ್ತೆಯಲ್ಲಿ ಸರಿಯಾದ ಸಿಗ್ನಲ್ ವ್ಯವಸ್ಥೆ ಇಲ್ಲ. ಹೀಗಾಗಿ ಅಪಘಾತ ಹೆಚ್ಚುತ್ತಲೇ ಇವೆ. ಇದರಿಂದ ದ್ವಿಚಕ್ರ ವಾಹನ ಸವಾರರು, ಪಾದಚಾರಿಗಳು ಭಯದಲ್ಲೇ ಸಂಚಾರ ಮಾಡುತ್ತಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು. ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇನ್ನಾದರೂ ಪೊಲೀಸರು ಎಚ್ಚೆತ್ತುಕೊಂಡು ಪ್ರಮುಖ ರಸ್ತೆಗಳಲ್ಲಿ ಸಿಗ್ನಲ್ ಅಳವಡಿಸುವ ಮೂಲಕ ಅಪಘಾತಗಳನ್ನು ತಡೆಯಬೇಕಿದೆ ಎನ್ನುತ್ತಾರೆ ಸಾರ್ವಜನಿಕರು.
ಇದನ್ನೂ ಓದಿ: ತುಮಕೂರು ರಸ್ತೆಯಲ್ಲಿ ಭಯಾನಕ ರಸ್ತೆ ಅಪಘಾತ, ಮೂವರು ಗಂಭೀರ- ಸಿಸಿಟಿವಿ ದೃಶ್ಯ