ಬೈಕ್ನಿಂದ ಕೆಳಕ್ಕೆ ಬಿದ್ದ ಮಹಿಳೆ ತಲೆ ಮೇಲೆಯೇ ಹರಿದ ಲಾರಿ ಚಕ್ರ - Bike and Lorry Accident
🎬 Watch Now: Feature Video
ಶಿವಮೊಗ್ಗ: ಹಿಂಬದಿಯಿಂದ ಓವರ್ಟೇಕ್ ಮಾಡಲು ಮುಂದಾದ ವೇಳೆ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಹಿಂಬದಿ ಕುಳಿತಿದ್ದ ಮಹಿಳೆ ಕೆಳಕ್ಕೆ ಬಿದ್ದಿದ್ದು, ಅವರ ತಲೆ ಮೇಲೆಯೇ ಲಾರಿ ಚಕ್ರ ಹರಿದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ನಗರದಲ್ಲಿ ಇಂದು ಬೆಳಗ್ಗೆ ನಡೆದಿದೆ. ದಂಪತಿ ಬೈಕ್ನಲ್ಲಿ ಬೈಪಾಸ್ ರಸ್ತೆಯಿಂದ ಬಸ್ ನಿಲ್ದಾಣಕ್ಕೆ ತೆರಳುತ್ತಿದ್ದ ವೇಳೆ ಯಮಹಾ ಶೋ ರೂಂ ಬಳಿ ಅವಘಡ ಸಂಭವಿಸಿದೆ. ಸಂಜಿದಾ ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ. ಇವರ ಪತಿ ಸೈಫುಲ್ಲಾಗೆ ಸಣ್ಣಪುಟ್ಟ ಗಾಯವಾಗಿದೆ. ಅಪಘಾತದ ದೃಶ್ಯ ಸ್ಥಳೀಯ ಶೋ ರೂಂವೊಂದರ ಸಿ ಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
Last Updated : Feb 3, 2023, 8:26 PM IST