ತಂದೆ-ಮಗ ಇಬ್ಬರಿಗೂ ಕೈತಪ್ಪಿದ ಸಚಿವ ಸ್ಥಾನ: ರಾಜಭವನದ ಬಳಿ ಎಂ ಕೃಷ್ಣಪ್ಪ, ಪ್ರಿಯಾಕೃಷ್ಣ ಬೆಂಬಲಿಗರ ಆಕ್ರೋಶ
🎬 Watch Now: Feature Video
ಬೆಂಗಳೂರು: ಸಚಿವ ಸ್ಥಾನ ಹಂಚಿಕೆ ಜಟಾಪಟಿ ಕೊನೆಗೊಂಡು, ರಾಜಭವನದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಮತ್ತೊಂದೆಡೆ ಸಚಿವ ಸ್ಥಾನ ವಂಚಿತರ ಅಸಮಾಧಾನ ಸಹ ಕಾಂಗ್ರೆಸ್ ಪಾಳಯದಲ್ಲಿ ಭುಗಿಲೆದ್ದಿದೆ. ವಿಜಯನಗರ ಶಾಸಕ ಎಂ. ಕೃಷ್ಣಪ್ಪ ಅವರಿಗೆ ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಬೇಸತ್ತ ಅವರ ಬೆಂಬಲಿಗರು ರಾಜಭವನದ ಬಳಿ ಜಮಾಯಿಸಿ ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದ್ದಾರೆ.
ರಾಜಭವನದ ಬಳಿ ಜಮಾಯಿಸಿದ ಕೃಷ್ಣಪ್ಪ ಹಾಗೂ ಪ್ರಿಯಾಕೃಷ್ಣ ಅವರ ಬೆಂಬಲಿಗರು ಪೋಸ್ಟರ್ ಹಿಡಿದು ಘೋಷಣೆ ಕೂಗಿ ತಮ್ಮ ಬೇಸರ ವ್ಯಕ್ತಪಡಿಸಿದ್ದಾರೆ. ವಿಜಯನಗರ ವಿಧಾನಸಭಾ ಕ್ಷೇತ್ರದಿಂದ ಎಂ. ಕೃಷ್ಣಪ್ಪ ಹಾಗೂ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಿಂದ ಅವರ ಪುತ್ರ ಪ್ರಿಯಾಕೃಷ್ಣ ಇಬ್ಬರೂ ಸಹ ಗೆಲುವು ಸಾಧಿಸಿದ್ದಾರೆ. ಇಬ್ಬರಲ್ಲಿ ಒಬ್ಬರಿಗಾದರೂ ಸಚಿವ ಸ್ಥಾನ ನೀಡಬೇಕಿತ್ತು. ಆದರೆ ಅನ್ಯಾಯವಾಗಿದೆ. ಮುಂದಿನ ಹೋರಾಟಕ್ಕೆ ನಾವು ಸಿದ್ಧರಾಗಿದ್ದೇವೆ ಎಂದು ಶಾಸಕ ಕೃಷ್ಣಪ್ಪ ಅವರ ಬೆಂಬಲಿಗರು ಆಗ್ರಹಿಸಿದ್ದಾರೆ. ಸಚಿವ ಸ್ಥಾನ ಸಿಗದಿದ್ದಕ್ಕೆ ಇನ್ನು ಕೆಲ ನಾಯಕರು ಅಸಮಾಧಾನಗೊಂಡಿದ್ದಾರೆ.
ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ ಬಹಿಷ್ಕರಿಸಿದ್ದು ಜೆಡಿಎಸ್ ಮರೆಯಬಾರದು ಎಂದ ಡಿಕೆಶಿ.. ನಾವು ಕಾಂಗ್ರೆಸ್‌ನ ಗುಲಾಮರಲ್ಲ ಎಂದ ಹೆಚ್ಡಿಕೆ!