ರಾಮನಗರ: ಪೌರಕಾರ್ಮಿಕರ ಜೊತೆ ಕುಣಿದು ಕುಪ್ಪಳಿಸಿದ ಮಾಗಡಿ ಶಾಸಕ - ಕುಲದಲ್ಲಿ ಕೀಳ್ಯಾವುದೋ ಹುಚ್ಚಪ್ಪ

🎬 Watch Now: Feature Video

thumbnail

By ETV Bharat Karnataka Team

Published : Oct 14, 2023, 9:29 AM IST

ರಾಮನಗರ: ಮಾಗಡಿ ಕ್ಷೇತ್ರದ ಶಾಸಕ ಹೆಚ್ ಸಿ ಬಾಲಕೃಷ್ಣ ಪೌರಕಾರ್ಮಿಕರ ಜೊತೆ ಭರ್ಜರಿ ನೃತ್ಯ ಮಾಡಿದ್ದಾರೆ. ರಾಮನಗರ ಜಿಲ್ಲೆಯ ಹೊರವಲಯದಲ್ಲಿರುವ ಖಾಸಗಿ ರೆಸಾರ್ಟ್​ನಲ್ಲಿ ಪುರಸಭೆ ವತಿಯಿಂದ ಪೌರ ಕಾರ್ಮಿಕರ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಶಾಸಕ ಹೆಚ್​ಸಿ ಬಾಲಕೃಷ್ಣ ಭಾಗವಹಿಸಿದ್ದರು. ಜೊತೆಗೆ ನೂರಾರು ಪೌರಕಾರ್ಮಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಕಾರ್ಯಕ್ರಮ ಮುಗಿದ ಬಳಿಕ ಶಾಸಕ ಹೆಚ್​ ಸಿ ಬಾಲಕೃಷ್ಣ ಪೌರ ಕಾರ್ಮಿಕರ ಜೊತೆ ಸಿನಿಮಾ ಹಾಡಿಗೆ ಹೆಜ್ಜೆ ಹಾಕಿದರು. ಕುಲದಲ್ಲಿ ಕೀಳ್ಯಾವುದೋ ಹುಚ್ಚಪ್ಪ ಹಾಡಿಗೆ ಭರ್ಜರಿ ಸ್ಟೆಪ್ಸ್​ ಹಾಕಿದರು. ಶಾಸಕರ ಜೊತೆ ಪುರಸಭೆ ಅಧಿಕಾರಿಗಳು, ಸಿಬ್ಬಂದಿ  ಕುಣಿದು ಕುಪ್ಪಳಿಸಿದರು. ಸಾಂಪ್ರದಾಯಿಕ ಉಡುಗೆ ತೊಟ್ಟು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶಾಸಕರು ಕಣ್ಣಿಗೆ ಕೂಲಿಂಗ್ ಗ್ಲಾಸ್ ಧರಿಸಿ ನೃತ್ಯ ಮಾಡಿದ್ದು, ಎಲ್ಲರ ಗಮನ ಸೆಳೆಯಿತು. ಶಾಸಕರು, ಸಚಿವರು, ಸರ್ಕಾರಿ ಅಧಿಕಾರಿಗಳು ಈ ರೀತಿ ವಿವಿಧ ಕಾರ್ಯಕ್ರಮಗಳಲ್ಲಿ ನೃತ್ಯ ಮಾಡಿ ರಂಜಿಸುವುದು ಆಗಾಗ್ಗೇ ವರದಿಯಾಗುತ್ತಿರುತ್ತವೆ. 

ಇದನ್ನೂ ಓದಿ : ವಿಡಿಯೋ: ಮದುವೆ ಕಾರ್ಯಕ್ರಮದಲ್ಲಿ ಸಖತ್ ಡ್ಯಾನ್ಸ್ ಮಾಡಿದ ಜೆಡಿಯು ಶಾಸಕ!

ABOUT THE AUTHOR

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.