ಮಹಾರಾಷ್ಟ್ರದಲ್ಲಿ ತೈಲ ಟ್ಯಾಂಕರ್ ಅಪಘಾತ: ನಾಲ್ವರು ಸಾವು, ಮೂವರಿಗೆ ಗಾಯ - etv bharat kannada
🎬 Watch Now: Feature Video
ಮಹಾರಾಷ್ಟ್ರ: ಮುಂಬೈ- ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಬರುವ ಲೋನಾವಾಲಾ ಮೇಲ್ಸೇತುವೆಯಲ್ಲಿ ಅಪಘಾತಕ್ಕೀಡಾದ ನಂತರ ತೈಲ ಟ್ಯಾಂಕರ್‌ಗೆ ಬೆಂಕಿ ಹೊತ್ತಿಕೊಂಡಿದ್ದು ನಾಲ್ವರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ವಿಷಯ ತಿಳಿದ ಅಗ್ನಿಶಾಮದಳ ಸಿಬ್ಬಂದಿ ಘಟನಾ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದರು. ಲೋನಾವಾಲಾ ಮೇಲ್ಸೇತುವೆ ಬದಲಾಗಿ ವಾಹನಗಳಿಗೆ ಬೇರೆ ಮಾರ್ಗದಲ್ಲಿ ಸಂಚರಿಸುವಂತೆ ಸೂಚಿಸಲಾಗಿದೆ. ಎಕ್ಸ್‌ಪ್ರೆಸ್‌ವೇಯಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗುತ್ತಿರುವುದರಿಂದ ತ್ವರಿತವಾಗಿ ಮೇಲ್ಸೇತುವೆಯಿಂದ ತೈಲ ಟ್ಯಾಂಕರ್ ತೆರವುಗೊಳಿಸುವ ಕಾರ್ಯಾಚರಣೆ ನಡೆಯಿತು.
ಇದನ್ನೂ ಓದಿ: Cyclone Biparjoy : ಸಮುದ್ರದಲ್ಲಿ ಸಿಲುಕಿದ್ದ 50 ಮಂದಿಯನ್ನು ರಕ್ಷಿಸಿದ ಭಾರತೀಯ ಕೋಸ್ಟ್ ಗಾರ್ಡ್- ವಿಡಿಯೋ
ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಹಾಗೂ ಗೃಹ ಸಚಿವ ದೇವೇಂದ್ರ ಫಡ್ನವಿಸ್ ಮೃತಪಟ್ಟವರ ಕುಟುಂಬಗಳಿಗೆ ಸಂತಾಪ ಸೂಚಿಸಿದರು. ಅಪಘಾತದಲ್ಲಿ ಮೂವರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶೀಘ್ರವಾಗಿ ಗುಣಮುಖರಾಗುವಂತೆ ಪ್ರಾರ್ಥಿಸುತ್ತೇನೆ. ರಾಜ್ಯ ಪೊಲೀಸ್, ಹೆದ್ದಾರಿ ಪೊಲೀಸರು, ಐಎನ್‌ಎಸ್ ಶಿವಾಜಿ ಸಿಬ್ಬಂದಿ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳದಲ್ಲಿದ್ದು, ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ವಿದ್ಯುತ್ ಅವಘಡ: ನೂರಾರು ಎಲೆಕ್ಟ್ರಿಕ್ ಉಪಕರಣಗಳು ಸುಟ್ಟು ಭಸ್ಮ, ನಾಲ್ವರಿಗೆ ಗಂಭೀರ ಗಾಯ