ಶಾಲಾ ಕೊಠಡಿಯಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳ ದಾಖಲಾತಿ : ರಸ್ತೆಗಿಳಿದು ವಿದ್ಯಾರ್ಥಿನಿಯರ ಪ್ರತಿಭಟನೆ - ಬಿಹಾರದಲ್ಲಿ ವಿದ್ಯಾರ್ಥಿನಿಯರ ಪ್ರತಿಭಟನೆ
🎬 Watch Now: Feature Video
Published : Sep 12, 2023, 9:25 PM IST
ವೈಶಾಲಿ (ಬಿಹಾರ): ಬಿಹಾರದ ವೈಶಾಲಿ ಜಿಲ್ಲೆಯ ಮಹಾನಾರ್ ಬ್ಲಾಕ್‌ನಲ್ಲಿನ ಸರ್ಕಾರಿ ಬಾಲಕಿಯರ ಪ್ರೌಢಶಾಲಾ ವಿದ್ಯಾರ್ಥಿನಿಯರು ಶಾಲೆಯಲ್ಲಿನ ಮೂಲಸೌಕರ್ಯಗಳ ಕೊರತೆ ಹಾಗೂ ಶಾಲಾ ಕೊಠಡಿಗಳಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳು ದಾಖಲಾತಿ ಮಾಡಲಾಗಿದೆ ಎಂದು ಆರೋಪಿಸಿ ಮಂಗಳವಾರ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ, ಪರಿಶೀಲನೆಗೆ ಎಂದು ಬಂದಿದ್ದ ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬರ ವಾಹನದ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ಶಾಲೆಯಲ್ಲಿನ ಸೌಕರ್ಯಗಳ ಕೊರತೆಯಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ವಾಹನದ ಮೇಲೆ ಕಲ್ಲುಗಳನ್ನು ಎಸೆದಿದ್ದಾರೆ.
ವಿದ್ಯಾರ್ಥಿನಿಯರ ಪ್ರತಿಭಟನೆಯ ವೇಳೆ, ಆ ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿತ್ತು. ನಂತರ ಶಿಕ್ಷಣಾಧಿಕಾರಿ, ಶಾಲಾ ಶಿಕ್ಷಕರು ಹಾಗೂ ಹಿರಿಯರು ವಿದ್ಯಾರ್ಥಿನಿಯರನ್ನು ಸಮಾಧಾನಪಡಿಸಿದ್ದಾರೆ. ಈ ವೇಳೆ, ಕೆಲವು ಸ್ಥಳೀಯ ಕಿಡಿಗೇಡಿಗಳು ಶಾಲಾ ವಿದ್ಯಾರ್ಥಿನಿಯರನ್ನು ಪ್ರಚೋದಿಸಿ ಉದ್ವಿಗ್ನತೆ ಹೆಚ್ಚಿಸಲು ಪ್ರಯತ್ನಿಸಿದ್ದಾರೆ ಎಂದು ಶಿಕ್ಷಣ ಇಲಾಖೆ ಅಧಿಕಾರಿ ಹೇಳಿದ್ದಾರೆ.
ಈ ಘಟನೆಯ ಬಗ್ಗೆ ಮೆಹನಾರ್‌ನ ಎಸ್‌ಡಿಒ ನೀರಜ್ ಕುಮಾರ್ ಮಾತನಾಡಿ, ಶಾಳೆಯಲ್ಲಿ ಸಾಮರ್ಥ್ಯಕ್ಕಿಂತ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಾಗಿದೆ. ಇದರಿಂದಾಗಿ ವಿದ್ಯಾರ್ಥಿಗಳು ತರಗತಿಯೊಳಗೆ ಕುಳಿತುಕೊಳ್ಳಲು ಸ್ಥಳವಕಾಶ ಇಲ್ಲದಂತಾಗಿದೆ. ಇಂದು ಕೂಡ ಕುಳಿತುಕೊಳ್ಳಲು ಸ್ಥಳ ಸಿಗದ ಕಾರಣ ವಿದ್ಯಾರ್ಥಿನಿಯರು ಶಾಲೆಯ ಬಳಿಯ ಮುಖ್ಯರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ ಎಂದು ಹೇಳಿದರು.
ಇದನ್ನೂ ಓದಿ: ಮಂಡ್ಯದಲ್ಲಿ ಮುಂದುವರೆದ ಕಾವೇರಿ ಹೋರಾಟ; ಇಂದಿನ ನೀರು ನಿಯಂತ್ರಣ ಸಮಿತಿ ಸಭೆಯತ್ತ ರೈತರ ಚಿತ್ತ