ದೆಹಲಿಯ ಕಾರ್ಖಾನೆಯೊಂದರಲ್ಲಿ ಭಾರಿ ಅಗ್ನಿ ಅವಘಡ: ಬಾನೆತ್ತರಕ್ಕೆ ವ್ಯಾಪಿಸಿದ ಹೊಗೆ
🎬 Watch Now: Feature Video
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಕಾರ್ಖಾನೆಯೊಂದರಲ್ಲಿ ಸೋಮವಾರ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಸದ್ಯ ಘಟನೆಯಲ್ಲಿ ಯಾವುದೇ ಸಾವು ನೋವುಗಳ ಬಗ್ಗೆ ವರದಿಯಾಗಿಲ್ಲ ಎಂದು ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದನ್ನೂ ಓದಿ: ಅಗ್ನಿ ಅವಘಡ : ಸುಟ್ಟು ಕರಕಲಾದ 90ರ ಹರೆಯದ ಇಬ್ಬರು, ಮತ್ತೋರ್ವನಿಗೆ ಗಾಯ
ದೆಹಲಿ ಅಗ್ನಿಶಾಮಕ ಸೇವೆಗಳ ಮುಖ್ಯಸ್ಥ ಅತುಲ್ ಗಾರ್ಗ್ ಅವರ ಪ್ರಕಾರ, ಪಶ್ಚಿಮ ದೆಹಲಿ ಪ್ರದೇಶದ ನಿಲೋತಿ ಗ್ರಾಮದ ಕಾರ್ಖಾನೆಯಲ್ಲಿ ಇಂದು ಬೆಳಗ್ಗೆ 8.52ಕ್ಕೆ ಬೆಂಕಿ ಕಾಣಿಸಿಕೊಂಡಿದೆ. ಒಟ್ಟು 10 ಅಗ್ನಿಶಾಮಕ ಟೆಂಡರ್‌ಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ಹತೋಟಿಗೆ ತರಲು ಪ್ರಯತ್ನಿಸುತ್ತಿದ್ದಾರೆ. ಬೆಂಕಿ ಅನಾಹುತಕ್ಕೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಘಟನಾ ಸ್ಥಳದಲ್ಲಿ ಸಂಗ್ರಹಿಸಿಟ್ಟಿದ್ದ ಅಪಾರ ಪ್ರಮಾಣದ ಪ್ಲಾಸ್ಟಿಕ್ ಪೈಪ್‌ಗಳನ್ನು ನೋಡಬಹುದಾಗಿದೆ. ಬೆಂಕಿ ಹೊತ್ತಿಕೊಂಡ ಸ್ಥಳದಲ್ಲಿ ದಟ್ಟ ಹೊಗೆ ಆಗಸದ ಎತ್ತರಕ್ಕೆ ವ್ಯಾಪಿಸಿದೆ.
ಇದನ್ನೂ ಓದಿ: Kolkata airport: ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಅಗ್ನಿ ಅವಘಡ; ಸ್ಥಳಕ್ಕೆ ಅಗ್ನಿಶಾಮಕ ದಳ ದೌಡು