ವಿಡಿಯೋ: ನಡೆದು ಹೋಗುತ್ತಿದ್ದ ವ್ಯಕ್ತಿ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವು! - ಕುಸಿದು ಬಿದ್ದು ವ್ಯಕ್ತಿ ಸಾವು
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-15574388-thumbnail-3x2-news.jpg)
ಜಬುವಾ(ಮಧ್ಯಪ್ರದೇಶ): ಮಧ್ಯಪ್ರದೇಶದ ಜಬುವಾ ಜಿಲ್ಲೆಯಲ್ಲಿ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಇದ್ದಕ್ಕಿದ್ದಂತೆ ಬಿದ್ದು ಸಾವನ್ನಪ್ಪಿದ್ದಾರೆ. ಈ ದೃಶ್ಯ ಅಲ್ಲೇ ಸಮೀಪದಲ್ಲಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮೃತ ವ್ಯಕ್ತಿಯನ್ನು ಬಾಬು ಭುರಿಯಾ ನಿವಾಸಿ ಬಡಾ ಸೆಮಾಲಿಯಾ ಎಂದು ಗುರುತಿಸಲಾಗಿದೆ. ವ್ಯಕ್ತಿ ರಸ್ತೆ ಮೇಲೆ ಬಿದ್ದಿದ್ದು, 4 ಗಂಟೆಗಳ ಕಾಲ ಶವ ಅಲ್ಲೇ ಇತ್ತು. ಯಾವುದೇ ಚಲನವಲನ ಕಾಣದಿದ್ದಾಗ ಅಲ್ಲಿನ ನಿವಾಸಿಗಳು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕಾಗಮಿಸಿ ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ. ವ್ಯಕ್ತಿಯು ಹೃದಯಾಘಾತದಿಂದ ಸಾವನ್ನಪ್ಪಿರಬಹುದು ಎಂದು ಪೊಲೀಸರು ಶಂಕಿಸಿದ್ದು, ಮರಣೋತ್ತರ ಪರೀಕ್ಷೆ ವರದಿ ಬಂದ ನಂತರವಷ್ಟೇ ಸಾವಿನ ನಿಖರ ಕಾರಣ ತಿಳಿಯಲಿದೆ.
Last Updated : Feb 3, 2023, 8:23 PM IST