ಹುಬ್ಬಳ್ಳಿಯಲ್ಲಿ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವು: ಸಿಸಿಟಿವಿಯಲ್ಲಿ ದೃಶ್ಯ ಸೆರೆ - ಬೈಕ್ ಸವಾರ ಸಾವು
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-17007318-thumbnail-3x2-news.jpg)
ಹುಬ್ಬಳ್ಳಿ: ರಸ್ತೆ ದಾಟುವಾಗ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರಸ್ಥಳದಲ್ಲೇ ಸಾವನಪ್ಪಿದ್ದಾರೆ. ಬೆಳಗಲಿ ಕ್ರಾಸ್ ಬಳಿ ನ.21 ರಂದು ಈ ಘಟನೆ ನಡೆದಿದೆ. ತಬೀಬ್ ಲ್ಯಾಂಡ್ ನಿವಾಸಿ ಮಹಮ್ಮದ್ ನವಾಜ್ (29) ಮೃತ ವ್ಯಕ್ತಿ. ಅಪಘಾತದ ನಂತರ ಲಾರಿ ಸಮೇತ ಚಾಲಕ ಪರಾರಿಯಾಗಿದ್ದಾನೆ. ಭಯಾನಕ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಸಂಬಂಧ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated : Feb 3, 2023, 8:33 PM IST