ನೃತ್ಯ ಮಾಡುವಾಗ ಹಠಾತ್ ಸಾವು: ಜವರಾಯನ ನಿರ್ಣಯಕ್ಕೆ ಸಂತೋಷ ಕೂಟವೇ ಬರ್ಕಾಸ್ತು - ETV Bharath Karnataka
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/640-480-17744460-thumbnail-4x3-don.jpg)
ಪ್ರಯಾಗ್‌ರಾಜ್ (ಉತ್ತರ ಪ್ರದೇಶ): ಇತ್ತೀಚೆಗೆ ಹೃದಯ ಸ್ತಂಭನದಿಂದ ಸಾವನ್ನಪ್ಪುತ್ತಿರುವ ಘಟನೆಗಳು ಅಲ್ಲಲ್ಲಿ ಬೆಳಕಿಗೆ ಬರುತ್ತಲೇ ಇವೆ. ಸಾಮಾಜಿಕ ಜಾಲತಾಣದಲ್ಲಿ ಒಂದು ವಿಡಿಯೋ ಹರಿದಾಡುತ್ತಿದ್ದು, ಅದರಲ್ಲಿ ಡ್ಯಾನ್ಸ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿರುವುದು ಕಂಡು ಬರುತ್ತದೆ. ಇದು ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆದ ಘಟನೆ ಎಂದು ತಿಳಿದು ಬಂದಿದ್ದು, ವಿವಾಹ ವಾರ್ಷಿಕೋತ್ಸವದ ಪಾರ್ಟಿಯ ವೇಳೆ ಸಾವು ಸಂಭವಿಸಿದೆ ಎನ್ನಲಾಗಿದೆ.
46 ವರ್ಷದ ಅಮರದೀಪ್ ವರ್ಮಾ ಸಾವನ್ನಪ್ಪಿದ ವ್ಯಕ್ತಿ ಎಂದು ತಿಳಿದು ಬಂದಿದ್ದು, ಅಣ್ಣನ ವಿವಾಹ ವಾರ್ಷಿಕೋತ್ಸವದ ನಿಮಿತ್ತ ಆಯೋಜಿಸಿದ್ದ ಪಾರ್ಟಿಯಲ್ಲಿ ಪಾಲ್ಗೊಳ್ಳಲು ತೆರಳಿದ್ದರು. ಸಮಾರಂಭಕ್ಕೆ ಅಮರದೀಪ್ ಅವರ ಪತ್ನಿ ಜೊತೆ ತೆರಳಿದ್ದು, ಎಲ್ಲರೂ ಖುಷಿಯಿಂದ ಸಂಭ್ರಮಿಸುತ್ತಿದ್ದರು. ಈ ವೇಳೆ ಪಾರ್ಟಿಯಲ್ಲಿ ಸಿನಿಮಾ ಹಾಡಿಗೆ ಡ್ಯಾನ್ಸ್ ಮಾಡುವಾಗ ಕುಸಿದು ಬಿದ್ದಿದ್ದಾರೆ. ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸಿದರೂ ವೈದ್ಯರು ಮೃತ ಪಟ್ಟಿರುವ ಬಗ್ಗೆ ತಿಳಿಸಿದ್ದಾರೆ.
ಇದನ್ನೂ ಓದಿ: ಮದುವೆ ಮುಗಿಸಿ ಹಿಂತಿರುಗುತ್ತಿದ್ದ ಬುಲೆಟ್ಗೆ ಅಪರಿಚಿತ ವಾಹನ ಡಿಕ್ಕಿ; 3 ಜನ ಬೈಕ್ ಸವಾರರು ಸಾವು