ಚಿಕಿತ್ಸೆಗೆ ನೆರವು ಕೋರಿ ಕರೆತಂದ ಮಗುವನ್ನು ಸಿಎಂ ಕುಳಿತಿದ್ದ ವೇದಿಕೆಯತ್ತ ಎಸೆದ ತಂದೆ! - ಮಧ್ಯಪ್ರದೇಶ

🎬 Watch Now: Feature Video

thumbnail

By

Published : May 17, 2023, 2:25 PM IST

ಭೋಪಾಲ್:‌ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದಾಗ ವ್ಯಕ್ತಿಯೊಬ್ಬ ತನ್ನ ಒಂದು ವರ್ಷದ ಮಗುವನ್ನು ವೇದಿಕೆಯ ಮೇಲೆ ಎಸೆದಿರುವ ಘಟನೆ ಸಾಗರದಲ್ಲಿ ವರದಿಯಾಗಿದೆ. ಇದು ನೆರೆದಿದ್ದವರಲ್ಲಿ ಭಾರಿ ಗೊಂದಲ ಉಂಟು ಮಾಡಿತು. 

ಸಾಗರದ ಕೆಸ್ಲಿ ತಹಸಿಲ್‌ನ ಸಹಜ್‌ಪುರ ಗ್ರಾಮದ ನಿವಾಸಿಯಾಗಿರುವ ಮುಖೇಶ್ ಪಟೇಲ್ ಹಾಗೂ ನೇಹಾ ದಂಪತಿಗೆ ಒಂದು ವರ್ಷದ ಮಗುವಿದೆ. ಆ ಮಗುವಿನ ಹೃದಯದಲ್ಲಿ ರಂಧ್ರವಿದೆ. ಈವರೆಗೆ ಮಗುವಿನ ಚಿಕಿತ್ಸೆಗಾಗಿ 4 ಲಕ್ಷಕ್ಕೂ ಅಧಿಕ ಹಣ ಖರ್ಚು ಮಾಡಿದ್ದಾರೆ. ಆದರೆ ಮಗುವಿನ ಶಸ್ತ್ರಚಿಕಿತ್ಸೆಗೆ ಹೆಚ್ಚಿನ ಹಣದ ಅಗತ್ಯವಿದೆ. ನೆರವಿನ ನಿರೀಕ್ಷೆಯಲ್ಲಿ ಕುಳಿತ ಕುಟುಂಬ ಸೋತು ಹೋಗಿದೆ.

ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಇತ್ತೀಚೆಗೆ ಸಾರ್ವಜನಿಕ ಸಮಾವೇಶದಲ್ಲಿ ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ತನ್ನ ಮಗುವಿನೊಂದಿಗೆ ಮುಖೇಶ್ ಪಟೇಲ್ ದಂಪತಿ ತೆರಳಿದ್ದರು. ಮೊದಲು ಪೊಲೀಸರ ಬಳಿ ಹೋಗಿ ಮುಖ್ಯಮಂತ್ರಿ ಅವರನ್ನು ಭೇಟಿಯಾಗಬೇಕೆಂದು ಹೇಳಿದ್ದಾರೆ. ಆದರೆ ಪೊಲೀಸರು ಇದಕ್ಕೆ ಒಪ್ಪಿಗೆ ನೀಡಿಲ್ಲ. ಕಾರ್ಯಕ್ರಮ ನಡೆಯುತ್ತಿದ್ದಾಗಲೇ ಮುಖ್ಯಮಂತ್ರಿಯ ಗಮನಕ್ಕೆ ತರಲು ಮುಖೇಶ್‌ ತನ್ನ ಒಂದು ವರ್ಷದ ಮಗುವನ್ನು ವೇದಿಕೆಯ ಬಳಿ ಎಸೆದಿದ್ದಾನೆ. ಕೂಡಲೇ ಮಗುವನ್ನು ಅಧಿಕಾರಿಗಳು ಮೇಲೆತ್ತಿ ತಾಯಿಗೆ ನೀಡಿದ್ದಾರೆ. ಬಳಿಕ ಅಧಿಕಾರಿಗಳು ಈ ವಿಚಾರವನ್ನು ಮುಖ್ಯಮಂತ್ರಿಗೆ ಹೇಳಿದ್ದಾರೆ. ಆತನ ಮಗುವಿನ ಹೃದಯದಲ್ಲಿ ರಂಧ್ರವಿದೆ. ಸಹಾಯಕ್ಕಾಗಿ ಬಂದಿದ್ದಾರೆ ಎಂದು ತಿಳಿಸಿದ್ದಾರೆ. ಇದಕ್ಕೆ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಎಲ್ಲಾ ಸಹಾಯ ಮಾಡುವುದಾಗಿ ಭರವಸೆಯನ್ನು ನೀಡಿದ್ದಾರೆ.   

ನನ್ನ ಮಗು 3 ತಿಂಗಳು ಇರುವಾಗ ಹೃದಯದಲ್ಲಿ ರಂಧ್ರ ಕಾಣಿಸಿಕೊಂಡಿತ್ತು. ಇದಕ್ಕಾಗಿ 4 ಲಕ್ಷಕ್ಕೂ ಅಧಿಕ ಖರ್ಚು ಮಾಡಿದ್ದೇನೆ. ವೈದ್ಯರು ಸರ್ಜರಿ ಮಾಡಬೇಕೆಂದು ಅದಕ್ಕೆ 3.50 ಲಕ್ಷ ವೆಚ್ಚವಾಗಲಿದೆ ಎಂದಿದ್ದಾರೆ. ಅಷ್ಟು ದೊಡ್ಡ ಮೊತ್ತವನ್ನು ಸಂಗ್ರಹಿಸುವುದು ನಮ್ಮಿಂದ ಸಾಧ್ಯವಿಲ್ಲ. ಹೀಗಾಗಿ ಅಸಹಾಯಕತೆಯಲ್ಲಿದ್ದೆವು. ಆದರೆ, ಮುಖ್ಯಮಂತ್ರಿಯನ್ನು ಭೇಟಿ ಮಾಡಲು ಪೊಲೀಸರು ನಮಗೆ ಅವಕಾಶ ನೀಡಲಿಲ್ಲ. ಹೀಗಾಗಿ ಕಾರ್ಯಕ್ರಮದಲ್ಲಿ ವೇದಿಕೆಯತ್ತ ಮಗುವನ್ನು ಎಸೆದಿದ್ದಾಗಿ ಮಗುವಿನ ತಂದೆ ಮುಖೇಶ್‌ ಪಟೇಲ್‌  ಹೇಳಿದ್ದಾರೆ

ಇದನ್ನೂ ಓದಿ: ಕಟ್ಟಡದ ಮೇಲಿಂದ 9 ತಿಂಗಳ ಮಗು ಎಸೆದು ತಾಯಿಯೂ ಆತ್ಮಹತ್ಯೆ!

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.