ಮಣ್ಣೆತ್ತಿನ ಅಮಾವಾಸ್ಯೆ-ಚಾಮುಂಡಿ ಬೆಟ್ಟದಲ್ಲಿ ಸ್ತ್ರೀ ಸಾಗರ: ವಿಡಿಯೋ
🎬 Watch Now: Feature Video
ಮೈಸೂರು: ಶಕ್ತಿ ಯೋಜನೆ ಪರಿಣಾಮ ಮಣ್ಣೆತ್ತಿನ ಅಮಾವಾಸ್ಯೆಗೆ ವಿವಿಧ ದೇವಾಲಯಗಳಲ್ಲಿ ದೇವರ ದರ್ಶನ ಪಡೆಯಲು ಮಹಿಳೆಯರ ದಂಡು ಹರಿದು ಬಂದಿದೆ. ಅಮಾವಾಸ್ಯೆ, ಆಷಾಢ ಮಾಸದ ಹಿನ್ನೆಲೆ ಚಾಮುಂಡಿ ಬೆಟ್ಟದಲ್ಲಿ ಭಕ್ತ ಸಾಗರ ತುಂಬಿ ತುಳುಕಿದೆ. ಸರತಿ ಸಾಲಿನಲ್ಲಿ ಸಾಗಿ ಭಕ್ತರು ದೇವಿಯ ದರ್ಶನ ಪಡೆದರು.
ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಹಿನ್ನೆಲೆ ಚಾಮುಂಡಿ ದೇವಾಲಯದ ಆವರಣದಲ್ಲಿ ಭಕ್ತರು, ಪ್ರವಾಸಿಗರು ಕಿಕ್ಕಿರಿದು ತುಂಬಿದ್ದರು. ಕೆಎಸ್ಆರ್ಟಿಸಿ ಬಸ್‌ಗಳು ಫುಲ್ ರಶ್ ಆಗಿದ್ದವು. ನಂಜುಂಡೇಶ್ವರನ ದರ್ಶನ ಪಡೆಯಲು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.
ಶಕ್ತಿ ಯೋಜನೆ: ಕಾಂಗ್ರೆಸ್ ಸರ್ಕಾರದ ಬಹು ನಿರೀಕ್ಷಿತ ಐದು ಗ್ಯಾರಂಟಿಗಳ ಪೈಕಿ ಮೊದಲನೆಯದಾಗಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜೂ. 11ರಂದು ಚಾಲನೆ ನೀಡಿದ್ದರು. ಅಂದು ಮಧ್ಯಾಹ್ನದಿಂದ ರಾಜ್ಯದ ಮಹಿಳೆಯರು ಕೆಎಸ್ಆರ್ ಟಿಸಿ ಹಾಗೂ ಬಿಎಂಟಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿತ್ತು. ಉಚಿತ ಪ್ರಯಾಣ ಯೋಜನೆಯು ಪ್ರತಿದಿನ 41.8 ಲಕ್ಷಕ್ಕೂ ಹೆಚ್ಚು ಮಹಿಳೆಯರಿಗೆ ಅನುಕೂಲವಾಗಲಿದೆ. 18,609 ಬಸ್‌ಗಳ ಸೇವೆಯು ಉಚಿತ ಪ್ರಯಾಣಕ್ಕೆ ಲಭ್ಯವಿದೆ. ಈ ಯೋಜನೆಗೆ ವಾರ್ಷಿಕ 4051.56 ಕೋಟಿ ರೂ. ವೆಚ್ಚವಾಗಲಿದೆ ಎಂದು ಸರ್ಕಾರ ಅಂದಾಜಿಸಿದೆ.
ಇದನ್ನೂ ಓದಿ: ಮಣ್ಣೆತ್ತಿನ ಅಮಾವಾಸ್ಯೆ- ಮಾದಪ್ಪನ ಬೆಟ್ಟದಲ್ಲಿ ನಾರಿಯರ ದಂಡು: ವಿಡಿಯೋ