ಅಜಿತ್ ಪವಾರ್ ಬಣದ ಎನ್‌ಸಿಪಿ ಶಾಸಕನ ಮನೆ ಮೇಲೆ ಮರಾಠ ಮೀಸಲಾತಿ ಹೋರಾಟಗಾರರ ಕಲ್ಲು ತೂರಾಟ, ವಾಹನಗಳಿಗೆ ಬೆಂಕಿ

🎬 Watch Now: Feature Video

thumbnail

ಬೀಡ್​ (ಮಹಾರಾಷ್ಟ್ರ): ರಾಜ್ಯದಲ್ಲಿ ಮರಾಠಾ ಮೀಸಲಾತಿ ಹೋರಾಟದ ಕಾವು ಹೆಚ್ಚಾಗಿದ್ದು, ಇಂದು ಚಳವಳಿ ಹಿಂಸಾಚಾರಕ್ಕೆ ತಿರುಗಿದೆ. ಬೀಡ್ ಜಿಲ್ಲೆಯ ಮಜಲಗಾಂವ್‌ನಲ್ಲಿರುವ ಎನ್‌ಸಿಪಿ ಅಜಿತ್ ಪವಾರ್ ಬಣದ ಶಾಸಕ ಪ್ರಕಾಶ್ ಸೋಲಂಕೆ ಅವರ ಮನೆ ಮೇಲೆ ಮರಾಠ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿ, ವಾಹನಗಳಿಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಸದ್ಯ ಜಿಲ್ಲೆಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.

ಮರಾಠಾ ಮೀಸಲಾತಿಗೆ ಒತ್ತಾಯಿಸಿ ಆಗಸ್ಟನಲ್ಲಿ ಪ್ರತಿಭಟನೆ ಆರಂಭಗೊಂಡಿತ್ತು. ಎರಡನೇ ಹಂತದ ಪ್ರತಿಭಟನೆಯ ಭಾಗವಾಗಿ ಕೋಟಾ ಕಾರ್ಯಕರ್ತ ಮನೋಜ್ ಜಾರಂಗೆ ಎಂಬುವವರು ಅಕ್ಟೋಬರ್ 25 ರಿಂದ ಜಲ್ನಾ ಜಿಲ್ಲೆಯ ಅಂತರವಾಲಿ ಸಾರತಿ ಗ್ರಾಮದಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದರಿಂದ ಮರಾಠಾ ಮೀಸಲಾತಿ ಪ್ರತಿಭಟನೆ ತೀವ್ರಗೊಂಡಿದೆ.

ಘಟನೆ ಬಗ್ಗೆ ಶಾಸಕ ಪ್ರಕಾಶ್​ ಸೋಲಂಕಿ ಪ್ರತಿಕ್ರಿಯೆ ನೀಡಿದ್ದು, ಕಲ್ಲು ತೂರಾಟದ ವೇಳೆ ನಾನು ಮನೆಯಲ್ಲಿ ಇದ್ದೆ. ಅದೃಷ್ಟವಶಾತ್ ನನ್ನ ಕುಟುಂಬದ ಸದಸ್ಯರು ಮತ್ತು ಮನೆಯಲ್ಲಿದ್ದ ನಮ್ಮ ಸಿಬ್ಬಂದಿಗೆ ಯಾವುದೇ ಗಾಯಗಳಾಗಿಲ್ಲ. ಎಲ್ಲರೂ ಸುರಕ್ಷಿತವಾಗಿದ್ದಾರೆ. ಆದರೆ, ಬೆಂಕಿ ಹಚ್ಚಿರುವುದರಿಂದ ಅಪಾರ ಪ್ರಮಾಣದ ಆಸ್ತಿ ನಷ್ಟವಾಗಿದೆ ಎಂದು ಬೀಡ್‌ನಲ್ಲಿರುವ ಶಾಸಕ ಸೋಲಂಕಿ ಹೇಳಿರುವುದಾಗಿ ಎಎನ್​ಐ ಸುದ್ದಿ ಸಂಸ್ಥೆ ವರದಿ ಮಾಡಿದೆ. 

ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ಮತ್ತೊಬ್ಬ ಉಗ್ರನನ್ನು ಹೊಡೆದುರುಳಿಸಿದ ಭಾರತೀಯ ಸೇನೆ

Last Updated : Oct 30, 2023, 2:43 PM IST

ABOUT THE AUTHOR

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.