ಪ್ಲಾಸ್ಟಿಕ್ ಗೋದಾಮಿನಲ್ಲಿ ಭಾರೀ ಅಗ್ನಿ ಅವಘಡ - ವಿಡಿಯೋ - ಈಟಿವಿ ಭಾರತ ಕನ್ನಡ
🎬 Watch Now: Feature Video
ಹೈದರಾಬಾದ್ : ಪ್ಲಾಸ್ಟಿಕ್ ತ್ಯಾಜ್ಯದ ಗೋದಾಮಿನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿರುವ ಘಟನೆ ನಗರದ ಕಾಲಾಪತ್ಥರ್ ಪೊಲೀಸ್ ಠಾಣಾ ವ್ಯಾಪ್ತಿಯ ಅನ್ಸಾರಿ ರಸ್ತೆಯಲ್ಲಿ ನಡೆದಿದೆ. ಸುಮಾರು 7 ಅಗ್ನಿ ಶಾಮಕ ದಳದ ವಾಹನಗಳು ಸ್ಥಳಕ್ಕೆ ಆಗಮಿಸಿದ್ದು, ಅಗ್ನಿ ಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಇನ್ನು ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ತನಿಖೆ ನಡೆಯುತ್ತಿದೆ. ಬೆಂಕಿ ನಂದಿಸುವ ಕಾರ್ಯ ಭರದಿಂದ ಸಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಗುರುವಾರ ಸಂಜೆ ಸಿಕಂದರಾಬಾದ್‌ನಲ್ಲಿ ಅಗ್ನಿ ಅವಘಡ ಸಂಭವಿಸಿತ್ತು. ಘಟನೆಯಲ್ಲಿ ಆರು ಮಂದಿ ಮೃತಪಟ್ಟಿದ್ದರು. ಕಳೆದ ಆರು ತಿಂಗಳಲ್ಲಿ ಸಿಕಂದರಾಬಾದ್‌ನಲ್ಲಿ ಸಂಭವಿಸಿದ ಮೂರನೇ ಅಗ್ನಿ ಅವಘಡ ಇದಾಗಿತ್ತು. ಇಲ್ಲಿನ ಬಹುಮಹಡಿ ಕಟ್ಟಡದ ಐದನೇ ಮಹಡಿಯಲ್ಲಿ ಉಂಟಾದ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಉಂಟಾಗಿದೆ ಎಂದು ತಿಳಿದುಬಂದಿದೆ. ಬಳಿಕ ನಾಲ್ಕನೇ ಮಹಡಿಗೂ ಬೆಂಕಿಯ ಕೆನ್ನಾಲಿಗೆ ಹರಡಿದೆ.
ಇದನ್ನೂ ಓದಿ : ಅಗ್ನಿ ಅವಘಡದಿಂದ ಬಯಲಾಯ್ತು ಮಲ್ಟಿ ಮಾರ್ಕೆಟಿಂಗ್ ಹಗರಣ.. ಹಣದ ಜೊತೆ ಜೀವವೂ ಹೋಯ್ತು