ಜಮ್ಮು - ಕಾಶ್ಮೀರದಲ್ಲಿ ಭಾರಿ ಭೂ ಕುಸಿತ: ಓರ್ವ ಸಾವು, ಆರು ಮಂದಿಗೆ ಗಾಯ - jammu and kashmir land slide

🎬 Watch Now: Feature Video

thumbnail

By

Published : Mar 7, 2023, 6:46 PM IST

ರಾಂಬನ್ (ಜಮ್ಮು ಮತ್ತು ಕಾಶ್ಮೀರ): ಹೆದ್ದಾರಿಯಲ್ಲಿ ಕಾರಿನಲ್ಲಿ ಚಲಿಸುತ್ತಿದ್ದ ವೇಳೆ ಭಾರಿ ಭೂ ಕುಸಿತ ಊಂಟಾಗಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಆರು ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಂಬನ್ ಜಿಲ್ಲೆಯ ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ನಡೆದಿದೆ. ಗಾಯಳುಗಳನ್ನ ರಾಂಬನ್​ನ ಜಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಘಟನೆ ಬಗ್ಗೆ ಮಾತನಾಡಿದ ಜಿಲ್ಲಾ ಅಭಿವೃದ್ಧಿ ಆಯುಕ್ತ ಮುಸುರತ್​ ಇಸ್ಲಾಂ, ಮಂಗಳವಾರ ಮಧ್ಯಾಹ್ನ ಸೆರಿ ಎಂಬ ಪ್ರದೇಶದ ಬಳಿ ಭಾರಿ ಭೂ ಕುಸಿತ ಸಂಭವಿಸಿದ್ದು, ಎರಡು ವಾಹನಗಳು ಅವಶೇಷಗಳಡಿ ಹೂತು ಹೋಗಿವೆ ಘಟನೆಯಲ್ಲಿ ಒಬ್ಬರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ, ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಜನರು ಅವಶೇಷಗಳ ಅಡಿ ಸಿಲುಕಿರುವ ಸಾಧ್ಯತೆಯಿದೆ ಎಂದು ತಿಳಿಸಿದರು. 

ಭೂ ಕುಸಿತದಲ್ಲಿ ಮೃತಪಟ್ಟವರನ್ನು ಸುಂಬರ್‌ನ ಶೇರ್ ಸಿಂಗ್ ಅವರ ಪುತ್ರ ಸುರ್ಜೀತ್ ಸಿಂಗ್ ಎಂದು ಗುರುತಿಸಲಾಗಿದೆ. ಗಾಯಗೊಂಡ ಆರು ಮಂದಿಯಲ್ಲಿ ಇಬ್ಬರ ಸ್ಥಿತಿ ಚಿಂತಾಜನಕ ಎಂದು ತಿಳಿದು ಬಂದಿದೆ. ಈ ನಡುವೆ ಮುನ್ನೆಚ್ಚರಿಕೆ ಕ್ರಮವಾಗಿ ಹೆದ್ದಾರಿಯಲ್ಲಿ ಸಂಚರಿಸುವುದನ್ನು ಬಂದ್‌ ಮಾಡಲಾಗಿದೆ.

ಇದನ್ನೂ ಓದಿ: ₹245 ಕೋಟಿ ಮೌಲ್ಯದ ಮಾದಕ ವಸ್ತು ವಶಕ್ಕೆ; ಐವರು ಇರಾನ್‌ ಪ್ರಜೆಗಳ ಬಂಧನ

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.