ಕಾಶ್ಮೀರಿ ಪಂಡಿತ ಸಂಜಯ್ ಶರ್ಮಾ ಹತ್ಯೆಯಲ್ಲಿ ಭಾಗಿಯಾಗಿದ್ದ ಉಗ್ರ ಹತ: ಪೊಲೀಸ್ ಇಲಾಖೆ - ಕಾಶ್ಮೀರಿ ಪಂಡಿತ ಸಂಜಯ್ ಶರ್ಮಾ
🎬 Watch Now: Feature Video
ಶ್ರೀನಗರ: ಭಾನುವಾರ ಪುಲ್ವಾಮಾದಲ್ಲಿ ಕಾಶ್ಮೀರಿ ಪಂಡಿತನ ಹತ್ಯೆಯಲ್ಲಿ ಭಾಗಿಯಾಗಿದ್ದ ಉಗ್ರನನ್ನು ಕೊಂದಿರುವುದಾಗಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಇಂದು ಹೇಳಿದ್ದಾರೆ. ಮಂಗಳವಾರ ಬೆಳಗ್ಗೆ ಪುಲ್ವಾಮಾ ಜಿಲ್ಲೆಯ ಅವಂತಿಪೋರ್‌ನ ಪದಗಂಪೋರಾ ಗ್ರಾಮದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಪುಲ್ವಾಮಾದ ಉಗ್ರಗಾಮಿ ಆದಿಲ್ ಮುಷ್ತಾಕ್ ಭಟ್ ಹತನಾದ ವ್ಯಕ್ತಿ ಎಂದು ಪೊಲೀಸರು ತಿಳಿಸಿದ್ದಾರೆ.
ಪುಲ್ವಾಮಾದಲ್ಲಿ ಕಾಶ್ಮೀರಿ ಪಂಡಿತ್ ಸಂಜಯ್ ಶರ್ಮಾ ಅವರನ್ನು ಹತ್ಯೆ ಮಾಡಿದ ಉಗ್ರರನ್ನು ಇಂದು ಬೆಳಗ್ಗೆ ಅವಂತಿಪೋರಾ ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಲಾಗಿದೆ ಎಂದು ಕಾಶ್ಮೀರ ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ವಿಜಯ್ ಕುಮಾರ್ ತಿಳಿಸಿದ್ದಾರೆ. "ಅಕಿಬ್ ಎ ವರ್ಗದ ಉಗ್ರಗಾಮಿಯಾಗಿದ್ದು, ಆರಂಭದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಜತೆ ಕೆಲಸ ಮಾಡುತ್ತಿದ್ದ. ಆದರೆ ಇತ್ತೀಚಿನ ದಿನಗಳಲ್ಲಿ TRF ಜೊತೆ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಪುಲ್ವಾಮಾ ಜಿಲ್ಲೆಯ ಅಚಾನ್ ಗ್ರಾಮದ ನಿವಾಸಿ ಸಂಜಯ್ ಶರ್ಮಾ ಅವರನ್ನು ಭಾನುವಾರ ಬೆಳಗ್ಗೆ ಅಪರಿಚಿತ ಉಗ್ರರು ಅವರ ಮನೆಯ ಹೊರಗೆ ಹತ್ಯೆ ಮಾಡಿದ್ದರು. ಶರ್ಮಾ ಅವರು ಖಾಸಗಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು.
ಸೇನಾ ಸಿಬ್ಬಂದಿ ಸಾವು: ಇನ್ನು ಇಂದು (ಮಂಗಳವಾರ) ಬೆಳಗ್ಗೆ ಅವಂತಿಪೋರಾದ ಪದಗಂಪೋರಾ ಗ್ರಾಮದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ನಡೆದಿದೆ. ಎನ್‌ಕೌಂಟರ್‌ನಲ್ಲಿ ಓರ್ವ ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದು, ಮತ್ತೊಬ್ಬ ಗಾಯಗೊಂಡಿದ್ದಾರೆ. ಸದ್ಯ ಅವರು ಶ್ರೀನಗರದ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ: ಭಯೋತ್ಪಾದಕರಿಂದ ಹತ್ಯೆಯಾದ ಕಾಶ್ಮೀರಿ ಪಂಡಿತ ಸಂಜಯ್ ಶರ್ಮಾ ಅಂತ್ಯಸಂಸ್ಕಾರ