ಹಿಂದೂ ಧರ್ಮ ಯಾವಾಗ ಹುಟ್ಟಿತು, ಯಾರು ಹುಟ್ಟಿಸಿದರು: ಗೃಹ ಸಚಿವ ಡಾ. ಜಿ ಪರಮೇಶ್ವರ್ ಪ್ರಶ್ನೆ - ಶಿಕ್ಷಕರ ದಿನಾಚರಣೆ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/06-09-2023/640-480-19440732-thumbnail-16x9-new.jpg)
![ETV Bharat Karnataka Team](https://etvbharatimages.akamaized.net/etvbharat/prod-images/authors/karnataka-1716535795.jpeg)
Published : Sep 6, 2023, 8:26 AM IST
ತುಮಕೂರು: ದೇಶದಲ್ಲಿ ಹಿಂದೂ ಧರ್ಮವನ್ನು ಯಾರು ಹುಟ್ಟು ಹಾಕಿದರು? ಎಂಬುದು ಪ್ರಶ್ನಾರ್ಥಕವಾಗಿಯೇ ಉಳಿದಿದೆ. ಇದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಅಭಿಪ್ರಾಯ ವ್ಯಕ್ತಪಡಿಸಿದರು. ಜಿಲ್ಲೆಯ ಕೊರಟಗೆರೆಯಲ್ಲಿ ಮಂಗಳವಾರ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು 'ದೇಶದಲ್ಲಿ ಬೌದ್ಧ ಧರ್ಮ ಮತ್ತು ಜೈನ ಧರ್ಮ ಹುಟ್ಟಿರುವಂತಹ ಇತಿಹಾಸವಿದೆ. ಆದರೆ ಹಿಂದೂ ಧರ್ಮ ಯಾವಗ ಹುಟ್ಟಿತು?, ಯಾರು ಹುಟ್ಟಿಸಿದರು? ಎಂಬುದು ದಾಖಲೆಗಳಿಲ್ಲ' ಎಂದು ಹೇಳಿದರು.
ಇದನ್ನೂ ಓದಿ: ಸನಾತನ ಧರ್ಮದ ಕುರಿತು ಉದಯನಿಧಿ ಹೇಳಿಕೆ ಖಂಡನೀಯ : ಆರಗ ಜ್ಞಾನೇಂದ್ರ
ಇನ್ನು, ವಿದೇಶದಿಂದ ಇಸ್ಲಾಂ ಮತ್ತು ಕ್ರೈಸ್ತ ಧರ್ಮಗಳು ನಮ್ಮ ದೇಶಕ್ಕೆ ಬಂದಿವೆ. ಪ್ರಪಂಚದ ಎಲ್ಲಾ ಧರ್ಮಗಳ ಸಾರಾಂಶ ಒಂದೇ ಮನುಕುಲಕ್ಕೆ ಒಳ್ಳೆಯದಾಗಲಿ ಎಂಬುದಾಗಿದೆ. ಬಡ ಕುಟುಂಬದಿಂದ ಬಂದ ಡಾ. ರಾಧಾಕೃಷ್ಣನ್ ಅವರು ಬದುಕಿನಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಯಾವ ರೀತಿ ಸಾಧನೆ ಮಾಡಿದರು ಎಂಬುದನ್ನು ನಾವು ಮಾದರಿಯಾಗಿ ಇಟ್ಟುಕೊಳ್ಳಬೇಕು ಎಂದು ಸಚಿವರು ಹೇಳಿದರು.
ಇದನ್ನೂ ಓದಿ: ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯ ಸರ್ಕಾರ ವಿರೋಧಿಸುತ್ತದೆ: ಗೃಹ ಸಚಿವ ಡಾ ಜಿ ಪರಮೇಶ್ವರ್