ಹುಬ್ಬಳ್ಳಿಯ ಮಿನಿವಿಧಾನಸೌಧಕ್ಕೆ ಸಚಿವ ಕೃಷ್ಣ ಬೈರೇಗೌಡ ಭೇಟಿ: ಅಧಿಕಾರಿಗಳ ತರಾಟೆ ತೆಗೆದುಕೊಂಡ ಸಚಿವ.. - ಹುಬ್ಬಳ್ಳಿ
🎬 Watch Now: Feature Video
Published : Sep 14, 2023, 1:56 PM IST
|Updated : Sep 14, 2023, 2:45 PM IST
ಹುಬ್ಬಳ್ಳಿ: ಹುಬ್ಬಳ್ಳಿಯ ಮಿನಿವಿಧಾನಸೌಧಕ್ಕೆ ಭೇಟಿ ನೀಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಹುಬ್ಬಳ್ಳಿಯ ಗ್ರಾಮೀಣ ಹಾಗೂ ನಗರ ತಹಶೀಲ್ದಾರರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಧಾರವಾಡ ಜಿಲ್ಲೆಯ ಪ್ರವಾಸ ಕೈಗೊಂಡಿರುವ ಸಚಿವರು ತಾಲೂಕಿನ ಆಡಳಿತ ಹಾಗೂ ಅಧಿಕಾರಿಗಳ ಕಾರ್ಯವೈಖರಿಯನ್ನು ಪರಿಶೀಲನೆ ನಡೆಸಿದರು. ಕಲಘಟಗಿ ತಾಲೂಕಿನ ಸರ್ಕಾರಿ ಕಚೇರಿಯ ಭೇಟಿ ಬಳಿಕ ಹುಬ್ಬಳ್ಳಿಯ ಮಿನಿವಿಧಾನಸೌಧಕ್ಕೆ ಆಗಮಿಸಿ ತಾಲೂಕಾಡಳಿತದ ಕಾರ್ಯವೈಖರಿ ಬಗ್ಗೆ ಅಧಿಕಾರಿಗಳಿಗೆ ಚಳಿ ಬಿಡಿಸಿದ್ದಾರೆ.
ಇನ್ನೂ ತಹಶೀಲ್ದಾರರಾದ ಕಲಗೌಡ ಪಾಟೀಲ ಹಾಗೂ ಪ್ರಕಾಶ ನಾಶಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಇ-ಆಫೀಸ್ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸಿಬ್ಬಂದಿಗೆ ಸೂಕ್ತ ತರಬೇತಿ ನೀಡದೇ ಇರುವ ಹಿನ್ನೆಲೆಯಲ್ಲಿ ದಾಖಲೆಗಳು ತಿಂಗಳುಗಟ್ಟಲೆ ಕಚೇರಿಯಲ್ಲಿಯೇ ಕೊಳೆಯುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಲಕರಣೆಗಳ ಕೊರತೆಯ ಬಗ್ಗೆ ಸಮಜಾಯಿಷಿ ನೀಡಲು ಬಂದಿದ್ದ ತಹಶೀಲ್ದಾರರನ್ನು ಸಚಿವ ಕೃಷ್ಣ ಭೈರೇಗೌಡ ತರಾಟೆಗೆ ತೆಗೆದುಕೊಂಡಿದ್ದು, ಕೂಡಲೇ ಆನ್ಲೈನ್ ವ್ಯವಸ್ಥೆ ಅನುಷ್ಠಾನಕ್ಕೆ ಸೂಚನೆ ನೀಡಿದರು. ಹಾಗೆ ಕಚೇರಿಯಲ್ಲಿದ್ದ ದಾಖಲೆಗಳನೆಲ್ಲ ಪರಿಶೀಲಿಸಿದ ಸಚಿವರು ಪ್ರಶ್ನೆ ಮೇಲೆ ಪ್ರಶ್ನೆ ಮಾಡಿ ಅಧಿಕಾರಿಗಳಿಗೆ ಬೆವರಿಳಿಸಿದರು.
ಇದನ್ನೂ ಓದಿ: 62 ತಾಲೂಕು ಬರ ಘೋಷಣೆಗೆ ಅರ್ಹ, 134 ಇತರ ತಾಲೂಕುಗಳ ಬೆಳೆ ಸಮೀಕ್ಷೆಗೆ ಸೂಚನೆ: ಸಚಿವ ಕೃಷ್ಣ ಬೈರೇಗೌಡ