ರಿಲ್ಯಾಕ್ಸ್ ಮೂಡಿನಲ್ಲಿ ಸಚಿವ ಮುನೇನಕೊಪ್ಪ; ಕುಂದಗೋಳ ಬಿಜೆಪಿ ಅಭ್ಯರ್ಥಿ ಎಂ ಆರ್ ಪಾಟೀಲ್ ವಿಶ್ರಾಂತಿ
🎬 Watch Now: Feature Video
ಹುಬ್ಬಳ್ಳಿ:ವಿಧಾನಸಭಾ ಚುನಾವಣಾ ಮತದಾನದ ಪ್ರಕ್ರಿಯೆ ಮುಗಿಯುತ್ತಿದ್ದಂತೆ ಜನಪ್ರತಿನಿಧಿಗಳು ಹಾಗೂ ಅಭ್ಯರ್ಥಿಗಳು ಪ್ಯಾಮಿಲಿ ಜೊತೆಗೆ ರಿಲ್ಯಾಕ್ಸ್ ಮೂಡಿನಲ್ಲಿದ್ದಾರೆ. ನವಲಗುಂದ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಂಕರ ಪಾಟೀಲ ಮುನೇನಕೊಪ್ಪ ತಮ್ಮ ಪ್ಯಾಮಿಲಿ ಜೊತೆಗೆ ಸಮಯ ಕಳೆಯುತ್ತಿದ್ದು, ಇಷ್ಟು ದಿನ ಕೆಲಸದ ಒತ್ತಡದಲ್ಲಿದ್ದ ಜನನಾಯಕರು ಈಗ ಫುಲ್ ಕೂಲ್ ಮೂಡ್ನಲ್ಲಿದ್ದಾರೆ.
ಇನ್ನು ನವಲಗುಂದ ವಿಧಾನಸಭಾ ಚುನಾವಣೆಯ ಕುರಿತು ಮಾತನಾಡಿದ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ದೇಶದಲ್ಲಿ ಹಾಗೂ ರಾಜ್ಯದಲ್ಲಿ ಜನರು ಬಿಜೆಪಿ ಹಾಗೂ ನರೇಂದ್ರ ಮೋದಿಯವರ ಕಾರ್ಯವನ್ನು ನೋಡಿದ್ದಾರೆ. ಅಲ್ಲದೇ ಈ ಬಾರಿಯೂ ಕೂಡ ಬಿಜೆಪಿ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬರುತ್ತದೆ. ನಾನು ಕೂಡ ಜನರ ಆಶೀರ್ವಾದದಿಂದ ಆರಿಸಿ ಬರುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮತ್ತೊಂದೆಡೆ ಕುಂದಗೋಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ ಆರ್ ಪಾಟೀಲ್ ಅವರು ಕೂಡ ತಮ್ಮ ಮನೆಯ ಸದಸ್ಯರೊಂದಿಗೆ ಕಾಲ ಕಳೆದರು. ಕ್ಷೇತ್ರದಲ್ಲಿ ಇಷ್ಟು ದಿನ ಚುನಾವಣಾ ಕಾರ್ಯದಲ್ಲಿ ಬ್ಯುಸಿಯಾಗಿದ್ದರಿಂದ ಕುಟುಂಬ ಸದಸ್ಯರೊಂದಿಗೆ ಬೆರೆಯಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಎಲ್ಲ ರಾಜಕೀಯ ಜಂಜಾಟ ಮರೆತು ಮೊಮ್ಮಗ ಹಾಗೂ ಇತರ ಕುಟುಂಬ ಸದಸ್ಯರೊಂದಿಗೆ ಕಾಲ ಕಳೆದರು.
ಇದನ್ನೂಓದಿ:ಸಮೀಕ್ಷೆಗಳು ಏನೇ ಹೇಳಿದರೂ ಬಿಜೆಪಿಗೆ 115 ಸ್ಥಾನ ಬರುತ್ತೆ: ಬಿಎಸ್ವೈ ವಿಶ್ವಾಸ