ದೇವರ ಬಗ್ಗೆ ಆಕ್ಷೇಪಾರ್ಹ ಪೋಸ್ಟ್: ಯುವಕನನ್ನು ಥಳಿಸಿದ ದೇವಿ ಭಕ್ತರು - maharashtra news
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/640-480-18554894-thumbnail-16x9-sa.jpg)
ಥಾಣೆ (ಮಹಾರಾಷ್ಟ್ರ): ಸಾಮಾಜಿಕ ಜಾಲತಾಣದಲ್ಲಿ ದೇವರ ಬಗ್ಗೆ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದಕ್ಕಾಗಿ ಓರ್ವ ಯುವಕನನ್ನು ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿರುವ ವಿಡಿಯೋ ವೈರಲ್ ಆಗಿದ್ದು, ಪೊಲೀಸರು ಯುವಕನನ್ನು ಥಳಿಸಿದ 12 ಜನರನ್ನು ಬಂಧಿಸಿದ್ದಾರೆ. ಯುವಕನೊಬ್ಬ ಪುಣೆ ಜಿಲ್ಲೆಯ ಎಕ್ವೀರಾ ದೇವಿಯ ಬಗ್ಗೆ ಇನ್ಸ್ಟಾಗ್ರಾಂನಲ್ಲಿ ಅಕ್ಷೇಪಾರ್ಹವಾಗಿ ಪೋಸ್ಟ್ ಮಾಡಿದಕ್ಕಾಗಿ ಸಿಟ್ಟಿಗೆದ್ದ ದೇವಿ ಭಕ್ತರು ಯುವಕನನ್ನು ಥಳಿಸಿ, ಬಟ್ಟೆ ಹರಿದು ಆರೆ ನಗ್ನಗೊಳಿಸಿ ರಸ್ತೆಯಲ್ಲಿ ಮೆರವಣಿಗೆ ಮಾಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ಈ ಘಟನೆ ಬಗ್ಗೆ ಸಹಾಯಕ ಪೊಲೀಸ್ ಆಯುಕ್ತ ಉಮೇಶ್ ಮಾನೆ ಮಾತನಾಡಿ, ಕಾನೂನನ್ನು ಕೈಗೆತ್ತಿಕೊಳ್ಳದೇ ಮೊದಲು ಪೊಲೀಸ್ ಠಾಣೆಯನ್ನು ಸಂಪರ್ಕಿಸಬೇಕು ಎಂದು ಮನವಿ ಮಾಡಿದ್ದಾರೆ. ಪೊಲೀಸರು ಇದುವರೆಗೆ ಹನ್ನೆರಡು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಲ್ಲಿ ಕೆಲವು ಮಹಿಳೆಯರು ಸಹ ಪಾಲ್ಗೊಂಡಿದ್ದಾರೆ. ವಿಡಿಯೋ ಪರಿಶೀಲನೆ ಮಾಡಿ ಹಲ್ಲೆ ನಡೆಸಿದ ಆರೋಪಿಗಳಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಇದನ್ನೂ ಓದಿ: ನೋಟ್ ಬ್ಯಾನ್ ಸಂದರ್ಭದಲ್ಲಿ ನೂರು ರೂಪಾಯಿಗಾಗಿ ಸಹೋದ್ಯೋಗಿಯ ಕೊಲೆ : ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್