ಪಲ್ಸರ್ ಬೈಕ್ಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು: ಸುಟ್ಟು ಕರಕಲಾದ ದ್ವಿಚಕ್ರ ವಾಹನ.. - ವೈಯಕ್ತಿಕ ಕಾರಣಕ್ಕೆ ಕೃತ್ಯ
🎬 Watch Now: Feature Video
ಹುಬ್ಬಳ್ಳಿ : ಮನೆಯ ಮುಂದೆ ನಿಲ್ಲಿಸಿದ್ದ ಪಲ್ಸರ್ 200- ಎನ್ಎಸ್ ಬೈಕ್ಗೆ ದುಷ್ಕರ್ಮಿಗಳು ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿರುವ ಪರಿಣಾಮ ಬೈಕ್ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಹುಬ್ಬಳ್ಳಿಯ ನವನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ನವನಗರದ ದಾದಾಫೀರ್ ಎಂಬುವವರು ರಾತ್ರಿಯ ವೇಳೆ ಮನೆ ಮುಂದೆ ಬೈಕ್ ನಿಲ್ಲಿಸಿದ್ದರು. ಆಗ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಇದರ ಪರಿಣಾಮವಾಗಿ ಬೈಕ್ಗೆ ಬೆಂಕಿ ಹೊತ್ತಿಕೊಂಡು ಸುತ್ತಮುತ್ತಲಿನ ಮನೆಗಳಿಗೂ ಹೊಗೆ ಆವರಿಸಿಕೊಂಡಿದೆ. ಅಲ್ಲದೇ ಪಕ್ಕದಲ್ಲಿ ನಿಲ್ಲಿಸಿದ್ದ ಬೈಕ್ಗಳಿಗೂ ಸ್ವಲ್ಪ ಪ್ರಮಾಣದಲ್ಲಿ ಬೆಂಕಿ ತಗುಲಿದೆ. ಆದರೆ ಅದೃಷ್ಟವಶಾತ್ ಯಾವುದೇ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಸುಳ್ಯದಲ್ಲಿ ವಿದ್ಯಾರ್ಥಿಗಳಿದ್ದ ಬೈಕ್ಗೆ ಕಾರು ಡಿಕ್ಕಿ; ಓರ್ವ ಬಲಿ, ಮತ್ತೋರ್ವ ಗಂಭೀರ
ವೈಯಕ್ತಿಕ ಕಾರಣಕ್ಕೆ ಕೃತ್ಯ ನಡೆದಿದೆ ಎಂದು ಶಂಕೆ ವ್ಯಕ್ತವಾಗುತ್ತಿದೆ. ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆಯ ನಂತರವೇ ಮಾಹಿತಿ ಲಭ್ಯವಾಗಬೇಕಿದೆ.
ಇದನ್ನೂ ಓದಿ: ಒಂದೇ ರಸ್ತೆಯಲ್ಲಿ ಎರಡು ಪ್ರತ್ಯೇಕ ಅಪಘಾತ :ಕೋಳಿ ತುಂಬಿದ್ದ ಬೈಕ್ ಸುಟ್ಟು ಕರಕಲು!