ಮಂಡ್ಯ: ಬ್ಯಾಂಕ್ ದರೋಡೆಗೆ ಬಂದು ಸೆಕ್ಯೂರಿಟಿ ಗಾರ್ಡ್​ಗೆ ಚಾಕು ಇರಿದು ಪರಾರಿ - etv bharat kannada

🎬 Watch Now: Feature Video

thumbnail

By ETV Bharat Karnataka Team

Published : Oct 17, 2023, 10:36 PM IST

ಮಂಡ್ಯ: ಬ್ಯಾಂಕ್ ದರೋಡೆ ಬಂದ ಗುಂಪನ್ನು ತಡೆಯಲು ಯತ್ನಿಸಿದ ಸೆಕ್ಯೂರಿಟಿ ಗಾರ್ಡ್​ಗೆ ಚಾಕುವಿನಿಂದ ಇರಿದು ದರೋಡೆಕೋರರು ಪರಾರಿಯಾಗಿರುವ ಘಟನೆ ಕೆ.ಆರ್.ಪೇಟೆ ತಾಲ್ಲೂಕಿನ ಹರಿಹರಪುರ ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ. ಸೆಕ್ಯೂರಿಟಿ ಗಾರ್ಡ್ ಮನು ಗಾಯಗೊಂಡಿದ್ದಾರೆ. ಇವರು ಡಿಸಿಸಿ ಬ್ಯಾಂಕ್ ಹಾಗೂ ವಿ.ಎಸ್.ಎಸ್.ಎನ್ ನೌಕರ ಎಂದು ತಿಳಿದು ಬಂದಿದೆ. 

ಹರಿಹರಪುರ ಗ್ರಾಮದಲ್ಲಿರುವ ಡಿಸಿಸಿ ಬ್ಯಾಂಕ್ ಶಾಖೆಗೆ ಮುಸುಕುದಾರಿಗಳಾಗಿದ್ದ ಮೂವರು ದರೋಡೆಕೋರರು ನುಗ್ಗಲು ಯತ್ನಿಸಿದ್ದಾರೆ. ಕರ್ತವ್ಯನಿರತನಾಗಿದ್ದ ಸೆಕ್ಯೂರಿಟಿ ಗಾರ್ಡ್ ದರೋಡೆಕೋರರನ್ನು ತಡೆದು ಕಿರುಚಿದ್ದಾರೆ. ಇದರಿಂದ ವಿಚಲಿತರಾದ ದರೋಡೆಕೋರರು ಬ್ಯಾಂಕ್ ಬೀಗ ಒಡೆಯಲು ಸಾಧ್ಯವಾಗದೇ ಇದ್ದಾಗ ಮನು ಹೊಟ್ಟೆಯ ಭಾಗಕ್ಕೆ ಇರಿದು ಕೊಲೆಗೆ ಯತ್ನಿಸಿದ್ದಾರೆ. ಬಳಿಕ ಸಾರ್ವಜನಿಕರು ಜಮಾಯಿಸುತ್ತಿರುವುದನ್ನು ಅರಿತು ಸ್ಥಳದಿಂದ ಪರಾರಿಯಾಗಿದ್ದಾರೆ.

ಚಾಕು ಇರಿತದಿಂದ ಗಾಯಗೊಂಡು ಅಸ್ವಸ್ಥಗೊಂಡಿದ್ದ ಮನು ಅವರನ್ನು ಜನರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಪ್ರಾಣಾಪಾಯದಿಂದ ಪಾರಾಗಿರುವ ಮನು ಅವರನ್ನು ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಹೆಚ್.ಕೆ.ಅಶೋಕ್‌, ಹರಿಹರಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಬ್ಯಾಂಕ್ ಅಧ್ಯಕ್ಷ ಮೋಹನ್, ಸಿಇಒ ಕಾಂತರಾಜು, ಮಾಜಿ ಅಧ್ಯಕ್ಷರಾದ ನಿಂಗರಾಜು, ಕೃಷ್ಣೇಗೌಡ, ಬಾಲಗಂಗಾಧರ ತಿಲಕ್, ರೇವಣ್ಣ, ಡೇರಿ ಅಧ್ಯಕ್ಷ ನಾಗೇಶ್ ಮತ್ತಿತರರು ಗಾಯಾಳು ಭೇಟಿ ಮಾಡಿ ಧೈರ್ಯ ತುಂಬಿದರು. ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿ ದುಷ್ಕರ್ಮಿಗಳನ್ನು ಪತ್ತೆ ಮಾಡಿ ಡಿಸಿಸಿ ಬ್ಯಾಂಕ್ ಮತ್ತು ವಿ.ಎಸ್.ಎಸ್.ಎನ್ ಬ್ಯಾಂಕ್ ಶಾಖೆಗಳಿಗೆ ಸೂಕ್ತ ಪೊಲೀಸ್ ಗಸ್ತು ಭದ್ರತೆ ಒದಗಿಸಿಕೊಡಬೇಕು ಎಂದು ಮನವಿ‌ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಅನೈತಿಕ ಸಂಬಂಧ, ವ್ಯಕ್ತಿ ಹತ್ಯೆಗೈದ ದಂಪತಿ ಬಂಧನ

ABOUT THE AUTHOR

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.