ಹಿರಿಯ ನಾಯಕರು 'ಡಿಸಿಎಂ' ಹುದ್ದೆ ಕೇಳುವುದರಲ್ಲಿ ತಪ್ಪಿಲ್ಲ: ಶಾಸಕ ಬಸನಗೌಡ ದದ್ದಲ್
🎬 Watch Now: Feature Video
ರಾಯಚೂರು: ಹಿರಿಯ ನಾಯಕರು ಉಪ ಮುಖ್ಯಮಂತ್ರಿ ಮಾಡುವಂತೆ ಕೇಳುವುದು ತಪ್ಪೇನೂ ಇಲ್ಲ. ಆದರೆ ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಹೇಳಿದರು.
ನಿನ್ನೆ (ಮಂಗಳವಾರ) ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಪಕ್ಷದಲ್ಲಿರುವ ಹಿರಿಯ ನಾಯಕರು ಡಿಸಿಎಂ ಹುದ್ದೆ ಕೇಳುವುದು ಸಹಜ. ನಮ್ಮ ಜಿಲ್ಲೆಯಲ್ಲಿಯೇ 4 ಜನರು ಶಾಸಕರಾಗಿ ಆಯ್ಕೆಯಾಗಿದ್ದೇವೆ. ನಾವು ಕೂಡ ಸಚಿವ ಸ್ಥಾನ ನೀಡುವಂತೆ ಸಹಜವಾಗಿ ಕೇಳುತ್ತೇವೆ. ಅದೇ ರೀತಿ ನಮ್ಮ ಪಕ್ಷದಲ್ಲಿರುವ ರಾಜ್ಯದ ಹಿರಿಯ ನಾಯಕರು ಉಪ ಮುಖ್ಯಮಂತ್ರಿ ಹುದ್ದೆಗೆ ಬೇಡಕೆ ಇಟ್ಟಿದ್ದಾರೆ. ಕೇಳುವುದಕ್ಕೆ ಹಕ್ಕಿದೆ, ಕೇಳಬಹುದು. ಆದರೆ ನಮ್ಮ ಪಕ್ಷದಲ್ಲಿ ಯಾವುದೇ ವಿಚಾರ ನಿರ್ಧಾರವಾಗಬೇಕಾದರೆ ಹೈಕಮಾಂಡ್ ತೀರ್ಮಾನವೇ ಅಂತಿಮ. ಅದಕ್ಕೆ ನಾವು ಬದ್ಧರಾಗಿರುತ್ತೇವೆ ಎಂದರು. ಬಳಿಕ ಶಾಸಕರು ವಾಲ್ಮೀಕಿ ನಿಗಮದ ವತಿಯಿಂದ ಪರಿಶಿಷ್ಟ ಪಂಗಡದ ಸಮುದಾಯದ ಫಲಾನುಭವಿಗಳಿಗೆ ಮೋಟಾರ್ ಪಂಪ್ ಹಾಗೂ ಪೈಪ್ಗಳನ್ನು ವಿತರಿಸಿದರು.
ಇದನ್ನೂ ಓದಿ: ಹೆಚ್ಚುವರಿ ಡಿಸಿಎಂ ಹುದ್ದೆ ಬೇಡಿಕೆ; ರಾಜ್ಯ ಕೈ ನಾಯಕರಿಗೆ ಖಡಕ್ ಎಚ್ಚರಿಕೆ ನೀಡಿದ ಎಐಸಿಸಿ