ಲೋಕಸಭಾ ಚುನಾವಣೆ ಮುಂದಿಟ್ಟು ರಾಮನ ಹೆಸರಿನಲ್ಲಿ ರಾಜಕೀಯ ಸರಿಯೇ?: ಶಾಸಕ ಭೀಮಣ್ಣ ನಾಯ್ಕ - ಭೀಮಣ್ಣ ನಾಯ್ಕ
🎬 Watch Now: Feature Video


Published : Jan 4, 2024, 4:31 PM IST
ಕಾರವಾರ (ಉತ್ತರ ಕನ್ನಡ) : ಲೋಕಸಭಾ ಚುನಾವಣೆ ಮುಂದಿಟ್ಟುಕೊಂಡು ಬಿಜೆಪಿಗರು ರಾಮನ ಹೆಸರಿನಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಆದರೆ ರಾಮನ ವಿಚಾರದಲ್ಲಿ ಯಾರೂ ಕೂಡ ರಾಜಕೀಯ ಮಾಡಬಾರದು ಎಂದು ಶಾಸಕ ಭೀಮಣ್ಣ ನಾಯ್ಕ ಕಿಡಿಕಾರಿದ್ದಾರೆ.
ಕಾರವಾರದಲ್ಲಿ ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಧರ್ಮವನ್ನು ಎಲ್ಲರೂ ಹಿಂದಿನಿಂದ ಆಚರಣೆ ಮಾಡುತ್ತಿದ್ದಾರೆ. ಇದೀಗ ಪಾರ್ಲಿಮೆಂಟ್ ಚುನಾವಣೆ ಹತ್ತಿರ ಬರುತ್ತಿದ್ದಂತೆ ಬಿಜೆಪಿಗರು ರಾಮನ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಜನರು ಇವರಿಗೆ ತಕ್ಕ ಉತ್ತರ ಕೊಡಲಿದ್ದಾರೆ ಎಂದರು.
ಇನ್ನು ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಗೋಧ್ರಾ ಹತ್ಯಾಕಾಂಡದ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು ಹಿಂದಿನ ಹಿನ್ನೆಲೆ ಇಟ್ಟುಕೊಂಡು ಹೇಳಿಕೆ ನೀಡಿದ್ದಾರೆ. ಚುನಾವಣೆ ಇಲ್ಲವೇ ಇತರೆ ಸಂದರ್ಭದಲ್ಲಿ ಹಲವು ಘಟನೆಗಳನ್ನು ಆಗಿರುವುದನ್ನು ನೋಡಿದ್ದೇವೆ. ಈ ಹಿನ್ನೆಲೆಯಲ್ಲಿ ರಾಮ ಮಂದಿರ ಉದ್ಘಾಟನೆ ವೇಳೆ ಇಂತಹ ಘಟನೆ ಆಗಬಾರದು ಎಂದು ಹೇಳಿದ್ದಾರೆ. ಈ ಹಿಂದೆ ಚುನಾವಣೆ ವೇಳೆ ಉತ್ತರ ಕನ್ನಡ ಜಿಲ್ಲೆಯಲ್ಲಿಯೇ ಪರೇಶ ಮೇಸ್ತಾ ಪ್ರಕರಣದಲ್ಲಿ ಬೆಂಕಿ ಹಚ್ಚಿದ್ದನ್ನು ನೋಡಿದ್ದೇವೆ. ಆದರೆ ಸಿಬಿಐ ಕೂಡ ಈ ಪ್ರಕರಣದಲ್ಲಿ ಸಹಜ ಸಾವು ಎಂದು ವರದಿ ನೀಡಿದೆ ಎಂದು ಶಾಸಕ ಭೀಮಣ್ಣ ತಿಳಿಸಿದರು.
ಇದನ್ನೂ ಓದಿ : ಸಿದ್ದರಾಮಯ್ಯ, ಆಂಜನೇಯ ಮನೆಗೂ ಅಯೋಧ್ಯೆಯ ಮಂತ್ರಾಕ್ಷತೆ ಬರುತ್ತೆ: ಸಿ ಟಿ ರವಿ