ದತ್ತಮಾಲೆ ಹಾಕುವ ಬಗ್ಗೆ ಇನ್ನೂ ಯೋಚಿಸಿಲ್ಲ: ಕಾಂಗ್ರೆಸ್ ಶಾಸಕ ಹೆಚ್.ಡಿ.ತಮ್ಮಯ್ಯ - MLA H D Thammaiah

🎬 Watch Now: Feature Video

thumbnail

By ETV Bharat Karnataka Team

Published : Dec 17, 2023, 5:47 PM IST

ಚಿಕ್ಕಮಗಳೂರು: ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ವತಿಯಿಂದ ನಡೆಯುವ ದತ್ತ ಜಯಂತಿಗೆ ಇಂದು ಅಧಿಕೃತ ಚಾಲನೆ ಸಿಕ್ಕಿದೆ. ದತ್ತಮಾಲೆ ಧಾರಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ದೊರೆಯಿತು. ಮಾಲೆಧಾರಣೆ ಕುರಿತು ಕಾಂಗ್ರೆಸ್ ಶಾಸಕ ಹೆಚ್.ಡಿ.ತಮ್ಮಯ್ಯ ಪ್ರತಿಕ್ರಿಯಿಸಿ, ನಾನು ಈ ಬಾರಿ ದತ್ತಮಾಲೆ ಹಾಕುವ ಬಗ್ಗೆ ಇನ್ನೂ ಯೋಚನೆ ಮಾಡಿಲ್ಲ. ದೇವರು ಯಾವ ರೀತಿ ಮನಸ್ಸು ಕೊಡುತ್ತಾನೋ ನೋಡೋಣ ಎಂದರು.

ಬೆಳಗಾವಿ ಅಧಿವೇಶನದಲ್ಲಿ ಪಾಲ್ಗೊಂಡಿದ್ದೆ. ಅಲ್ಲಿಂದ ನಿನ್ನೆ (ಶುಕ್ರವಾರ) ರಾತ್ರಿ ಬಂದಿದ್ದೇನೆ. ಇನ್ನೂ ಈ ಬಗ್ಗೆ ಜಿಲ್ಲಾಡಳಿತ ಮತ್ತು ಜಿಲ್ಲಾಧಿಕಾರಿ ಜೊತೆ ಚರ್ಚೆ ಮಾಡಿಲ್ಲ. ಜಿಲ್ಲಾಡಳಿತವು ಸರ್ಕಾರದ ಆದೇಶ ಮತ್ತು ಸುಪ್ರೀಂ ಕೋರ್ಟ್​ ಆದೇಶದಂತೆ ಕಾರ್ಯಕ್ರಮ ನಡೆಸಬಹುದು. ಈ ಬಗ್ಗೆ ಇನ್ನೂ ಮಾತುಕತೆ ನಡೆಸಿಲ್ಲ ಎಂದು ಹೇಳಿದರು.

ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಹೆಚ್‌.ಡಿ.ತಮ್ಮಯ್ಯ ದತ್ತಮಾಲೆ ಹಾಕುವ ಕುರಿತು ಜನರಲ್ಲಿ ಕುತೂಹಲ ಮೂಡಿದೆ. ಈ ಹಿಂದೆ ಬಿಜೆಪಿಯಲ್ಲಿದ್ದಾಗ ತಮ್ಮಯ್ಯ, ಪ್ರತಿ ವರ್ಷ ದತ್ತಮಾಲೆ ಹಾಕುತ್ತಿದ್ದರು.

ಇದನ್ನೂ ಓದಿ: 'ಮತದಾರರು ಪಾಸ್ ಕೇಳಿದಾಗ ಕೊಡಬೇಕಾಗುತ್ತೆ, ಪ್ರತಾಪ್​ ಸಿಂಹರ ತಪ್ಪಿಲ್ಲ'

ABOUT THE AUTHOR

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.