ಶಾಸಕ ನೆಹರು ಓಲೇಕಾರ ಬಿಜೆಪಿ ತೊರೆದಿಲ್ಲ: ಬಿಜೆಪಿ ಜಿಲ್ಲಾಧ್ಯಕ್ಷ ಕಲಕೋಟಿ
🎬 Watch Now: Feature Video
ಹಾವೇರಿ: ''ಶಾಸಕ ನೆಹರು ಓಲೇಕಾರ ಬಿಜೆಪಿ ತೊರೆದಿಲ್ಲ, ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿಲ್ಲ'' ಎಂದು ಬಿಜೆಪಿ ಹಾವೇರಿ ಜಿಲ್ಲಾಧ್ಯಕ್ಷ ಸಿದ್ದರಾಜ ಕಲಕೋಟಿ ಹೇಳಿದರು.
ನಗರದಲ್ಲಿ ಮಾತನಾಡಿದ ಅವರು, ''ಈ ಬಗ್ಗೆ ಪಕ್ಷದ ಹಿರಿಯ ನಾಯಕರು ತೀರ್ಮಾನ ಕೈಗೊಳ್ಳಲಿದ್ದಾರೆ. ಪಕ್ಷದ ಹಿರಿಯ ನಾಯಕರು ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧವಾಗಿರುತ್ತೇವೆ'' ಎಂದು ತಿಳಿಸಿದರು. ಏ.27ರಂದು ಪ್ರಧಾನಿ ನರೇಂದ್ರ ಮೋದಿ ಕಾರ್ಯಕರ್ತರನ್ನ ಉದ್ದೇಶಿಸಿದ ಮಾತನಾಡಲಿದ್ದು, ಆ ಭಾಷಣವನ್ನು ಜಿಲ್ಲೆಯ ಶಕ್ತಿ ಕೇಂದ್ರ ಮಹಾಶಕ್ತಿ ಕೇಂದ್ರಗಳಲ್ಲಿ ಪ್ರದರ್ಶಿಸಲಾಗುವುದು'' ಎಂದು ಅವರು ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಶಾ ಮತ್ತು ಉತ್ತರ ಪ್ರದೇಶ ಸಿಎಂ ಯೋಗಿ ಅಧಿತ್ಯನಾಥ್ ಸೇರಿದಂತೆ ಪಕ್ಷದ ಸ್ಟಾರ್ ಕ್ಯಾಂಪೇನರ್ ಹಾವೇರಿ ಜಿಲ್ಲೆಯ ವಿವಿಧಡೆ ಮತದಾರನನ್ನು ಉದ್ದೇಶಿಸಿ ಮಾತನಾಡಲಿದ್ದಾರೆ'' ಎಂದು ಸಿದ್ದರಾಜ ತಿಳಿಸಿದರು. ಮೇ 7ರಂದು ಹಾವೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಲಿದ್ದಾರೆ. ಈ ಸಮಾವೇಶದಲ್ಲಿ ಹಾವೇರಿ ಜಿಲ್ಲೆ ಸೇರಿದಂತೆ ಅಕ್ಕಪಕ್ಕ ಜಿಲ್ಲೆಗಳ ಸುಮಾರು 10 ವಿಧಾನಸಭಾ ಕ್ಷೇತ್ರಗಳ ಕಾರ್ಯಕರ್ತರು ಸೇರಲಿದ್ದಾರೆ'' ಎಂದರು. ''ಹಾವೇರಿ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಈ ಬಾರಿ ಬಿಜೆಪಿ ಜಯಭೇರಿ ಬಾರಿಸಲಿದೆ'' ಎಂದು ಅವರು, ಕಾಂಗ್ರೆಸ್ ಇಷ್ಟು ದಿನ ಬಿಟ್ಟು ಈಗ ಮತದಾರನಿಗೆ ಗ್ಯಾರಂಟಿ ಕಾರ್ಡ್ ಮೂಲಕ ಆಮೀಷ ಒಡ್ಡುತ್ತಿದೆ. ಇದಕ್ಕೆಲ್ಲ ಕಾಂಗ್ರೆಸ್ಗೆ ಎಲ್ಲಿಂದ ಹಣ ತರುತ್ತೆ ಎನ್ನುವುದನ್ನು ಸ್ಪಷ್ಟಪಡಿಸಲಿ'' ಎಂದು ಸಿದ್ದರಾಜ ಕಲಕೋಟಿ ಒತ್ತಾಯಿಸಿದರು.
ಇದನ್ನೂ ಓದಿ: ಮೋದಿ, ಅಮಿತ್ ಶಾ ಗಿಂತ ರಾಜ್ಯ ಬಿಜೆಪಿಯಲ್ಲಿ ಯಡಿಯೂರಪ್ಪ ದೊಡ್ಡ ನಾಯಕರು: ಬಿ ಕೆ ಹರಿಪ್ರಸಾದ್